ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಹಲವು ವಿಷಯಗಳ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಿದ್ದಾರೆ.
ಮೋದಿ ಭೇಟಿ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಮುಬೊಮ್ಮಾಯಿ, ಕಳೆದ 100 ದಿನಗಳಲ್ಲಿ ನಮ್ಮ ಸರ್ಕಾರ ನಡೆಸಿರುವ ಆಡಳಿತ, ಸುಧಾರಣಾ ಕ್ರಮಗಳು, ಯೋಜನೆಗಳ ಬಗ್ಗೆ ಪ್ರಧಾನಿಯವರು ಸಂತೋಷ ವ್ಯಕ್ತಪಡಿಸಿದ್ದಾರೆ. ರಾಜ್ಯದ ಜನತೆಯ ವಿಶ್ವಾಸ ಪಡೆಯುವಂತೆ ಮತ್ತು ಜನರ ಹಿತಕ್ಕಾಗಿ ಇನ್ನಷ್ಟು ಉತ್ತಮ ಕೆಲಸ ಮಾಡುವಂತೆ ಪ್ರಧಾನಿ ಹುರಿದುಂಬಿಸಿದ್ದಾರೆ ಎಂದಿದ್ದಾರೆ.
ಡಿಸೆಂಬರ್ ನಲ್ಲಿ ಬೆಂಗಳೂರಿಗೆ ಬಂದು ನಾಲ್ಕು ಕಾರ್ಯಕ್ರಮಗಳಲ್ಲಿ ಭಾಗಿಯಾಗುವಂತೆ ಪ್ರಧಾನಿಗೆ ಆಹ್ವಾನಿಸಲಾಗಿದೆ. ಇದರಲ್ಲಿ ಎರಡು ಕಾರ್ಯಕ್ರಮಗಳಿಗೆ ಅವರು ಆಗಮಿಸುವ ನಿರೀಕ್ಷೆ ಇದೆ ಎಂದಿದ್ದಾರೆ.
ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶದ ಬಗ್ಗೆ ಕೂಡ ಪ್ರಧಾನಿ ಜೊತೆ ಚರ್ಚೆ ನಡೆಸಿದ್ದೇನೆ, ಹಾನಗಲ್ ನಲ್ಲಿ ಅಲ್ಪ ಪ್ರಮಾಣದಲ್ಲಿ ಸೋತಿದ್ದೇವೆ ಎಂದಾಗ ಚುನಾವಣೆಯಲ್ಲಿ ಸೋಲು, ಗೆಲುವು ಸಾಮಾನ್ಯ, ಮುಂದಿನ ದಿನಗಳಲ್ಲಿ ಇನ್ನಷ್ಟು ಜನಪರ ಕೆಲಸಗಳನ್ನು ಮಾಡಿ ಜನರ ವಿಶ್ವಾಸ ಗಳಿಸಲು ಪ್ರಯತ್ನಿಸಿ ಎಂದು ಮೋದಿ ಹೇಳಿದರು ಎಂಬುದಾಗಿ ಬೊಮ್ಮಾಯಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.