ಬೆಂಗಳೂರು: ಇನ್ನು ಮುಂದೆ ಕೆಎಸ್ಆರ್ಟಿಸಿ ಬಸ್ಸುಗಳಲ್ಲಿ ಪ್ರಯಾಣ ಮಾಡುವ ಪ್ರಯಾಣಿಕರು ಮೊಬೈಲ್ನಲ್ಲಿ ಜೋರಾಗಿ ಹಾಡುಗಳನ್ನು ಹಾಕುವಂತಿಲ್ಲ. ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸುತ್ತೋಲೆಯನ್ನು ಹೊರಡಿಸಿದೆ.
ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು ಬಸ್ಸುಗಳಲ್ಲಿ ಪ್ರಯಾಣ ನಡೆಸುವ ವೇಳೆ ಹೆಚ್ಚಾಗಿ ಮೊಬೈಲ್ ಬಳಸುತ್ತಿರುತ್ತಾರೆ. ಜೋರಾಗಿ ಮಾತನಾಡುವುದು, ದೊಡ್ಡ ಶಬ್ದದೊಂದಿಗೆ ವಿಡಿಯೋ ನೋಡುವುದು, ಹಾಡು ಹಾಕುವುದು ಇತ್ಯಾದಿಗಳನ್ನು ಮಾಡುತ್ತಿರುತ್ತಾರೆ. ಇದರಿಂದ ಸುತ್ತಮುತ್ತ ಕುಳಿತುಕೊಂಡಿರುವ ಇತರ ಪ್ರಯಾಣಿಕರಿಗೆ ಕಿರಿಕಿರಿ ಉಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರಯಾಣದ ವೇಳೆ ಮೊಬೈಲ್ನಲ್ಲಿ ಜೋರಾಗಿ ಹಾಡುಗಳನ್ನು ಹಾಕುವುದಕ್ಕೆ ನಿರ್ಬಂಧ ವಿಧಿಸಲಾಗಿದೆ.
ಕೆಎಸ್ಆರ್ಟಿಸಿ ಬಸ್ಸುಗಳಲ್ಲಿ ಪ್ರಯಾಣಿಕರು ಮೊಬೈಲ್ ಮೂಲಕ ಜೋರಾಗಿ ಹಾಡು, ಸಿನಿಮಾ, ವಿಡಿಯೋ ಇತ್ಯಾದಿ ಹಾಕುವುದನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ ಎಂದು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.
ಈ ಸಂಬಂಧ ಕರ್ತವ್ಯನಿರತ ಚಾಲನ ಸಿಬ್ಬಂದಿಗಳು ಪ್ರಯಾಣಿಕರಿಗೆ ಸೂಕ್ತ ತಿಳುವಳಿಕೆ ನೀಡಬೇಕು ಹಾಗೂ ಸಹಪ್ರಯಾಣಿಕರಿಗೆ ತೊಂದರೆಯಾಗುವಂತೆ ಮೊಬೈಲ್ ಬಳಸದಂತೆ ವಿನಂತಿಸಬೇಕು ಎಂದು ತಿಳಿಸಿದೆ.
ಒಂದು ವೇಳೆ ನಿರ್ವಾಹಕರ ಮನವಿಗೆ ಮನ್ನಣೆ ನೀಡದೆ ಪ್ರಯಾಣಿಕರು ನಿಯಮ ಉಲ್ಲಂಘನೆ ಮಾಡಿದರೆ ಕರ್ನಾಟಕ ಮೋಟಾರು ವಾಹನಗಳ ನಿಯಮಾನುಸಾರ ಚಾಲಕ ಅಥವಾ ನಿರ್ವಾಹಕ ಸ್ಥಳದಲ್ಲಿಯೇ ಅಂತಹ ಪ್ರಯಾಣಿಕrನ್ನು ಬಸ್ಸಿನಿಂದ ಟಿಕೆಟ್ ದರ ವಾಪಾಸ್ ನೀಡದೆಯೇ ಇಳಿಸಬಹುದು ಎಂದು ತಿಳಿಸಿದೆ.
ಈ ನಿಯಮಗಳು ತಕ್ಷಣದಿಂದಲೇ ಜಾರಿಗೆ ಬರುತ್ತದೆ ಎಂದು ಸುತ್ತೋಲೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.