ನವದೆಹಲಿ: ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ ಮತ್ತು ಛತ್ತೀಸ್ಗಢ ಸೇರಿದಂತೆ 19 ರಾಜ್ಯಗಳ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ಆರೋಗ್ಯ ಕ್ಷೇತ್ರದ ಅನುದಾನವಾಗಿ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ರೂ 8,453.92 ಕೋಟಿ ಮೊತ್ತವನ್ನು ಬಿಡುಗಡೆ ಮಾಡಿದೆ ಎಂದು ಪ್ರಕಟಣೆ ತಿಳಿಸಿದೆ.
ಹದಿನೈದನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ಅನುದಾನ ಬಿಡುಗಡೆ ಮಾಡಲಾಗಿದೆ.
ಆಯೋಗವು 2021-22 ರಿಂದ 2025-26 ರವರೆಗಿನ ತನ್ನ ವರದಿಯಲ್ಲಿ ಸ್ಥಳೀಯ ಸರ್ಕಾರಗಳಿಗೆ ಒಟ್ಟು ರೂ 4,27,911 ಕೋಟಿ ಅನುದಾನವನ್ನು ಶಿಫಾರಸು ಮಾಡಿತ್ತು. ಆಯೋಗವು ಶಿಫಾರಸು ಮಾಡಿರುವ ಅನುದಾನದಲ್ಲಿ ರೂ 70,051 ಕೋಟಿ ಆರೋಗ್ಯ ಅನುದಾನವೂ ಸೇರಿದೆ. ಈ ಮೊತ್ತದಲ್ಲಿ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ರೂ 43,928 ಕೋಟಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ರೂ 26,123 ಕೋಟಿ ಶಿಫಾರಸು ಮಾಡಲಾಗಿದೆ.
ಈ ಅನುದಾನಗಳು ಆರೋಗ್ಯ ವ್ಯವಸ್ಥೆಗಳನ್ನು ಬಲಪಡಿಸಲು ಮತ್ತು ಪ್ರಾಥಮಿಕ ಆರೋಗ್ಯ ರಕ್ಷಣೆ ಮಟ್ಟವನ್ನು ಹೆಚ್ಚಿಸಲು ಉದ್ದೇಶಿಸಲಾಗಿದೆ. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಮೂಲಸೌಕರ್ಯ ಮತ್ತು ಸೌಲಭ್ಯಗಳನ್ನು ಬಲಪಡಿಸಲು ನೇರವಾಗಿ ಕಾರಣವಾಗುವ ಮಧ್ಯಸ್ಥಿಕೆಗಳನ್ನು ಆಯೋಗವು ಗುರುತಿಸಿದೆ ಮತ್ತು ಪ್ರತಿ ಮಧ್ಯಸ್ಥಿಕೆಗೆ ಅನುದಾನವನ್ನು ಮೀಸಲಿಟ್ಟಿದೆ.
2021-22ನೇ ಹಣಕಾಸು ವರ್ಷದಲ್ಲಿ ಬಿಡುಗಡೆ ಮಾಡಲು ಶಿಫಾರಸು ಮಾಡಲಾದ ಆರೋಗ್ಯ ಅನುದಾನವು ರೂ 13,192 ಕೋಟಿ ಮತ್ತು ಗ್ರಾಮೀಣಕ್ಕೆ ರೂ 8,273 ಕೋಟಿ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ರೂ 4,919 ಕೋಟಿಗಳನ್ನು ಒಳಗೊಂಡಿದೆ ಎಂದು ಪ್ರಕಟಣೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.