ನವದೆಹಲಿ: 2022 ರ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಮೊದಲ ಬಾರಿಗೆ ಮಹಿಳಾ ಕ್ರಿಕೆಟ್ ಪಂದ್ಯ ಆಯೋಜನೆಗೊಳ್ಳಲಿದೆ.
ಜುಲೈ 29 ರಂದು 2022 ರ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಮಹಿಳಾ ಕ್ರಿಕೆಟ್ ಪಾದಾರ್ಪಣೆ ಮಾಡುತ್ತಿದ್ದು, ಭಾರತವು ಆರಂಭಿಕ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಫೈನಲ್ ಪಂದ್ಯವು ಆಗಸ್ಟ್ 7 ರಂದು ನಡೆಯಲಿದೆ.
ಇದರ ಆಯೋಜಕರು ನಿನ್ನೆ ಟಿ20 ಮಾದರಿಯೊಂದಿಗೆ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಮಹಿಳಾ ಕ್ರಿಕೆಟ್ ಪಾದಾರ್ಪಣೆ ಮಾಡುತ್ತಿದೆ ಎಂದು ಘೋಷಿಸಿದ್ದಾರೆ.
ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ಹೇಳಿಕೆ ನೀಡಿ, ಜುಲೈ 29 ರಿಂದ ಎಡ್ಜ್ಬಾಸ್ಟನ್ ಸ್ಟೇಡಿಯಂನಲ್ಲಿ ಮಹಿಳಾ ಕ್ರಿಕೆಟ್ ಟಿ 20 ಸ್ಪರ್ಧೆ ನಡೆಯಲಿದ್ದು, ಆಗಸ್ಟ್ 7 ರಂದು ಕಂಚು ಮತ್ತು ಚಿನ್ನದ ಪದಕದ ಪಂದ್ಯಗಳು ನಡೆಯಲಿವೆ.
ಜುಲೈ 31 ರಂದು ಭಾರತ ಪಾಕಿಸ್ತಾನವನ್ನು ಎದುರಿಸಲಿದೆ. ಆಸ್ಟ್ರೇಲಿಯಾ ಕೂಡ ಆಗಸ್ಟ್ 3 ರಂದು ಪಾಕಿಸ್ತಾನವನ್ನು ಎದುರಿಸಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.