ನವದೆಹಲಿ: ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯ ಅಪಾಯಕಾರಿ ಮಟ್ಟವನ್ನು ತಲುಪಿದೆ, ಈ ಪರಿಸ್ಥಿತಿಯನ್ನು ಸುಪ್ರೀಂಕೋರ್ಟ್ ತುರ್ತುಪರಿಸ್ಥಿತಿ ಎಂದು ಹೇಳಿದೆ. ಅಲ್ಲದೇ, ವಾಯುಮಾಲಿನ್ಯ ತಡೆಗಟ್ಟಲು ತುರ್ತು ಕ್ರಮಗಳ ಕೈಗೊಳ್ಳುವಂತೆ ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ಶನಿವಾರ ಸೂಚನೆ ಮಾಡಿದೆ.
ವಾಹನಗಳು, ಕೈಗಾರಿಕೆಗಳು, ಕೃಷಿ ತ್ಯಾಜ್ಯ ಸುಡುವಿಕೆಯಿಂದ ಉಂಟಾಗುತ್ತಿರುವ ವಾಯು ಮಾಲಿನ್ಯವನ್ನು ನಿಯಂತ್ರಿಸಲು ಎರಡು ದಿನಗಳ ಲಾಕ್ಡೌನ್ ಘೋಷಿಸಿ ಎಂದು ಸುಪ್ರೀಂಕೋರ್ಟ್ ಸಲಹೆಯನ್ನೂ ನೀಡಿದೆ.
ರಾಷ್ಟ್ರ ರಾಜಧಾನಿಯಲ್ಲಿನ ವಾಯುಮಾಲಿನ್ಯಕ್ಕೆ ಸಂಬಂಧಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್’ನ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರು ಇಂದು ವಿಚಾರಣೆ ನಡೆಸಿದ್ದಾರೆ.
ವಿಚಾರಣೆ ವೇಳೆ ವಾಯುಮಾಲಿನ್ಯವನ್ನು ಗಂಭೀರವಾಗಿ ಪರಿಗಣಿಸಿಸಿದ ನ್ಯಾಯಾಲಯವು, ದೆಹಲಿ-ಎನ್ಸಿಆರ್ನಲ್ಲಿ ಮಾಲಿನ್ಯವನ್ನು ಪ್ರಸ್ತುತ ತೀವ್ರ ಮಟ್ಟದಿಂದ ತಗ್ಗಿಸಲು ಕೆಲವು ತಕ್ಷಣದ ಕ್ರಮಗಳನ್ನು ಪರಿಗಣಿಸುವಂತೆ ಸರ್ಕಾರಕ್ಕೆ ತಿಳಿಸಿದೆ
“ಪರಿಸ್ಥಿತಿ ಎಷ್ಟು ಕೆಟ್ಟದಾಗಿದೆ ಎಂದು ನೀವೇ ನೋಡಿ. ನಮ್ಮ ಮನೆಗಳಲ್ಲಿಯೂ ಕೂಡ ನಾವು ಮಾಸ್ಕ್ ಗಳನ್ನು ಧರಿಸಿದ್ದೇವೆ” ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.