ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ತಿರುಪತಿಯ ತಿರುಮಲದಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು.
“ಆಂಧ್ರಪ್ರದೇಶದ ತಿರುಮಲದಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿ ನಾನು ಪುನೀತನಾಗಿದ್ದೇನೆ. ವೆಂಕಟೇಶ್ವರನು ಎಲ್ಲರಿಗೂ ಶಾಂತಿ ಮತ್ತು ಸಮೃದ್ಧಿಯನ್ನು ನೀಡಲಿ” ಎಂದು ಶಾ ಟ್ವೀಟ್ ಮಾಡಿದ್ದಾರೆ.
ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಈ ವೇಳೆ ಶಾ ಅವರು ಜೊತೆಗಿದ್ದರು. ಇದಕ್ಕೂ ಮುನ್ನ ತಿರುಪತಿ ವಿಮಾನ ನಿಲ್ದಾಣದಲ್ಲಿ ಗೃಹ ಸಚಿವರಿಗೆ ಸಿಎಂ ಜಗನ್ ಆತ್ಮೀಯ ಸ್ವಾಗತ ಕೋರಿದರು.
ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕ, ಕೇರಳ, ತೆಲಂಗಾಣ ರಾಜ್ಯಗಳು ಮತ್ತು ಪುದುಚೇರಿ, ಲಕ್ಷದ್ವೀಪ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡಿರುವ ದಕ್ಷಿಣ ವಲಯ ಕೌನ್ಸಿಲ್ನ 29 ನೇ ಸಭೆಯ ಅಧ್ಯಕ್ಷತೆ ವಹಿಸಲು ಶಾ ಅವರು ಶನಿವಾರ ತಿರುಪತಿ ತಲುಪಿದರು.
ಗೃಹ ಸಚಿವಾಲಯದ ಪತ್ರಿಕಾ ಹೇಳಿಕೆಯ ಪ್ರಕಾರ, ರಾಜ್ಯಗಳನ್ನು ಸಬಲೀಕರಣಗೊಳಿಸಲು ಮತ್ತು ನೀತಿ ಚೌಕಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಉತ್ತಮ ತಿಳುವಳಿಕೆಯನ್ನು ಉತ್ತೇಜಿಸುವ ಸಹಕಾರಿ ಫೆಡರಲಿಸಂನ ದೂರದೃಷ್ಟಿಗೆ ಅಮಿತ್ ಶಾ ಉತ್ತೇಜನ ನೀಡಲಿದ್ದಾರೆ. ವಿವಾದಗಳನ್ನು ಪರಿಹರಿಸಲು ಮತ್ತು ಸಹಕಾರಿ ಫೆಡರಲಿಸಂ ಅನ್ನು ಉತ್ತೇಜಿಸಲು ವಲಯ ಮಂಡಳಿಯ ವೇದಿಕೆಯನ್ನು ಬಳಸಿಕೊಳ್ಳಲು ಅವರು ಒತ್ತು ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.