
ಲಕ್ನೋ: ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ಹಸುಗಳಿಗೆ ಆಂಬ್ಯುಲೆನ್ಸ್ ಸೇವೆಯನ್ನು ಪ್ರಾರಂಭಿಸಲು ಉತ್ತರ ಪ್ರದೇಶ ಸರ್ಕಾರ ಮುಂದಾಗಿದೆ.
ಈ ಬಗ್ಗೆ ಮಾಹತಿ ನೀಡಿರುವ ಯುಪಿ ಹೈನುಗಾರಿಕೆ ಅಭಿವೃದ್ಧಿ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವ ಲಕ್ಷ್ಮೀ ನಾರಾಯಣ ಚೌಧರಿ ಅವರು, ನವೀನ ಯೋಜನೆಗೆ 515 ಆಂಬ್ಯುಲೆನ್ಸ್ಗಳು ಸಿದ್ಧವಾಗಿವೆ, ಇದು ಬಹುಶಃ ದೇಶದಲ್ಲೇ ಮೊದಲನೆಯದು ಎಂದಿದ್ದಾರೆ.
” ಹೊಸ ಸೇವೆಯು ಗಂಭೀರವಾಗಿ ಅಸ್ವಸ್ಥಗೊಂಡ ಹಸುಗಳಿಗೆ ತ್ವರಿತ ಚಿಕಿತ್ಸೆಗೆ ದಾರಿ ಮಾಡಿಕೊಡುತ್ತದೆ” ಎಂದು ಅವರು ಮಥುರಾದಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಸೇವೆಯನ್ನು ಕೋರಿದ 15 ರಿಂದ 20 ನಿಮಿಷಗಳ ಅವಧಿಯಲ್ಲಿ ಪಶುವೈದ್ಯರು ಮತ್ತು ಇಬ್ಬರು ಸಹಾಯಕರೊಂದಿಗೆ ಆಂಬ್ಯುಲೆನ್ಸ್ ಬರುತ್ತದೆ ಎಂದು ಅವರು ಹೇಳಿದರು.
ಡಿಸೆಂಬರ್ ವೇಳೆಗೆ ಪ್ರಾರಂಭವಾಗುವ ಯೋಜನೆಯಡಿ, ದೂರುಗಳನ್ನು ಸ್ವೀಕರಿಸಲು ಲಕ್ನೋದಲ್ಲಿ ಕಾಲ್ ಸೆಂಟರ್ ಅನ್ನು ಸ್ಥಾಪಿಸಲಾಗುವುದು ಎಂದು ಸಚಿವರು ಹೇಳಿದರು.
ಉಚಿತ ಉತ್ತಮ ಗುಣಮಟ್ಟದ ವೀರ್ಯ ಮತ್ತು ಭ್ರೂಣ ಕಸಿ ತಂತ್ರಜ್ಞಾನವನ್ನು ಒದಗಿಸುವುದರೊಂದಿಗೆ ರಾಜ್ಯದ ತಳಿ ಸುಧಾರಣಾ ಕಾರ್ಯಕ್ರಮಕ್ಕೆ ಉತ್ತೇಜನ ಸಿಗುತ್ತದೆ ಎಂದು ಅವರು ಹೇಳಿದರು.
ಈ ಯೋಜನೆಯು ಮಥುರಾ ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಪ್ರಾಯೋಗಿಕ ಯೋಜನೆಯಾಗಿ ಪ್ರಾರಂಭವಾಗಲಿದೆ ಎಂದು ಅವರು ಹೇಳಿದರು.
ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಯೋಗಿ ಆದಿತ್ಯನಾಥ್ ಸರ್ಕಾರ ಬಿಡಾಡಿ ದನಗಳನ್ನು ಸಾಕಲು ಗೋಶಾಲೆಗಳಿಗೆ ಅನುದಾನ ನೀಡಿದೆ. ರಾಜ್ಯದಲ್ಲಿ ಹಿಂದಿನ ಯಾವುದೇ ಸರ್ಕಾರ ಇಂತಹ ಕ್ರಮ ಕೈಗೊಂಡಿಲ್ಲ ಎಂದು ಸಚಿವರು ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


