ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಂಚಿಯ ಸೆಂಟ್ರಲ್ ಓಲ್ಡ್ ಜೈಲ್ ಆವರಣದಲ್ಲಿ ಭಗವಾನ್ ಬಿರ್ಸಾ ಮುಂಡಾ ಸ್ವತಂತ್ರ ಸೇನಾನಿ ಸಂಗ್ರಹಾಲಯ ಸಹ ಸ್ಮೃತಿ ಉದ್ಯಾನವನ್ನು ಉದ್ಘಾಟಿಸಿದರು. ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮದಿನವನ್ನು ಪ್ರತಿ ನವೆಂಬರ್ 15 ರಂದು ಬುಡಕಟ್ಟು ಜನರ ಗೌರವ ದಿನ ಎಂದು ಆಚರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ವಸ್ತುಸಂಗ್ರಹಾಲಯವನ್ನು ಉದ್ಘಾಟಿಸಿ ಮಾತನಾಡಿದ ಮೋದಿ, ಮ್ಯೂಸಿಯಂ ಬುಡಕಟ್ಟು ಸಂಸ್ಕೃತಿಯ ಮತ್ತು ಸ್ವಾತಂತ್ರ್ಯ ಹೋರಾಟಕ್ಕೆ ಬುಡಕಟ್ಟು ವೀರರು ಮತ್ತು ಸ್ವಾತಂತ್ರ್ಯ ಹೋರಾಟಗಾರರು ನೀಡಿದ ಕೊಡುಗೆಯ ಜೀವಂತ ಸ್ಥಾಪನೆಯಾಗಲಿದೆ ಎಂದು ಹೇಳಿದರು.
ದೇಶದ ಸ್ವಾತಂತ್ರ್ಯ ಚಳವಳಿಯಲ್ಲಿ ಬುಡಕಟ್ಟು ಜನಾಂಗದ ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡ ಅವರ ಕೊಡುಗೆಯನ್ನು ಸ್ಮರಿಸಿದ ಪ್ರಧಾನಮಂತ್ರಿಯವರು, ಯುವಜನರು ಅವರಿಂದ ಕಲಿಯಬೇಕೆಂದು ಕರೆ ನೀಡಿದರು.
ಇಂದು ಜಾರ್ಖಂಡ್ ರಾಜ್ಯ ಸಂಸ್ಥಾಪನಾ ದಿನ ಕೂಡ ಆಗಿದೆ. ಜಾರ್ಖಾಂಡ್ ಪ್ರತ್ಯೇಕ ರಾಜ್ಯ ರಚನೆ ನಮ್ಮ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಕನಸಾಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಭೋಪಾಲ್ನ ಜಂಬೂರಿ ಮೈದಾನದಲ್ಲಿ ಬುಡಕಟ್ಟು ಜನರ ಗೌರವ ದಿನ ಮಹಾಸಮ್ಮೇಳನದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದು, ಅಲ್ಲಿ ಅವರು ಮಧ್ಯಾಹ್ನ 1 ಗಂಟೆಗೆ ಬುಡಕಟ್ಟು ಸಮುದಾಯದ ಕಲ್ಯಾಣಕ್ಕಾಗಿ ಅನೇಕ ಉಪಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.