ನವದೆಹಲಿ: ದೆಹಲಿ ಮೂಲದ ಇನ್ಸ್ಟಿಟ್ಯೂಟ್ ಫಾರ್ ಡಿಫೆನ್ಸ್ ಸ್ಟಡೀಸ್ ಅಂಡ್ ಅನಾಲೈಸಸ್ (Institute for Defence Studies and Analyses)ಗೆ ಮಾಜಿ ರಕ್ಷಣಾ ಸಚಿವ ದಿವಂಗತ ಮನೋಹರ್ ಪರಿಕ್ಕರ್ ಅವರ ಹೆಸರನ್ನು ಮರು ನಾಮಕರಣ ಮಾಡಲಾಗಿದೆ. ಹೀಗಾಗಿ ಇನ್ನು ಮುಂದೆ ಅದನ್ನು ಎಂಪಿ-ಐಡಿಎಸ್ಎ ಎಂದು ಕರೆಯಲಾಗುತ್ತದೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಪರಿಕ್ಕರ್ ಅವರ ಸ್ಮರಣಾರ್ಥ ಸಂಸ್ಥೆಯ ಫಲಕವನ್ನು ಅನಾವರಣಗೊಳಿಸಿದ್ದಾರೆ. ಈ ಸಂಸ್ಥೆಯು ನವೆಂಬರ್ 11 ರಂದು ತನ್ನ 57 ನೇ ಸಂಸ್ಥಾಪನಾ ದಿನವನ್ನು ಆಚರಿಸಿತ್ತು. ರಕ್ಷಣಾ ಸಚಿವರು ಈ ಸಂಸ್ಥೆಯ ಅಧ್ಯಕ್ಷರಾಗಿದ್ದಾರೆ.
ಈ ವರ್ಷದ ಆರಂಭದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸಂಸ್ಥೆಯ ಹೆಸರನ್ನು ಬದಲಾಯಿಸುವ ನಿರ್ಧಾರವನ್ನು ಸರ್ವಾನುಮತದಿಂದ ಅನುಮೋದಿಸಲಾಯಿತು.
ಪರಿಕ್ಕರ್ ಅವರಿಗೆ ಮೊನ್ನೆ ಮರಣೋತ್ತರ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ರಕ್ಷಣಾ ಸಚಿವರಾಗಿದ್ದಾಗ ಪರಿಕ್ಕರ್ ಅವರು ಸಂಸ್ಥೆಯ ಕಾರ್ಯವನ್ನು ಮುಂದಕ್ಕೆ ಕೊಂಡೊಯ್ಯಲು ವಿಶೇಷ ಗಮನ ಹರಿಸಿದ್ದರು ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ. ಅವರ ನೇತೃತ್ವದಲ್ಲಿ ಸಶಸ್ತ್ರ ಪಡೆಗಳ ಹಿತದೃಷ್ಟಿಯಿಂದ ತೆಗೆದುಕೊಂಡ ಏಕ ಶ್ರೇಣಿಯ ಒಂದು ಪಿಂಚಣಿ ನಿರ್ಧಾರವು ದೀರ್ಘಕಾಲ ನೆನಪಿನಲ್ಲಿ ಉಳಿಯುತ್ತದೆ ಎಂದಿದ್ದಾರೆ,
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.