ನವದೆಹಲಿ: ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನವೆಂಬರ್ 17 ರಿಂದ ಮೂರು ದಿನಗಳ ಕಾಲ ʼರಾಷ್ಟ್ರ ರಕ್ಷಾ ಸಮರ್ಪಣಾ ಪರ್ವ್ʼ ನಡೆಯಲಿದೆ.
ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ರಕ್ಷಣಾ ಕಾರ್ಯದರ್ಶಿ ಡಾ.ಅಜಯ್ ಕುಮಾರ್, ಮೂರು ದಿನ ʼರಾಷ್ಟ್ರ ರಕ್ಷಾ ಸಮರ್ಪಣಾ ಪರ್ವʼ ನಡೆಯಲಿದೆ. ನವೆಂಬರ್ 19 ರಂದು ಝಾನ್ಸಿ ಕೋಟೆಯ ಆವರಣದಲ್ಲಿ ಆಯೋಜಿಸಲಾಗುತ್ತಿರುವ ಭವ್ಯ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಲವಾರು ಯೋಜನೆಗಳನ್ನು ದೇಶಕ್ಕೆ ಅರ್ಪಿಸಲಿದ್ದಾರೆ ಎಂದಿದ್ದಾರೆ.
ನವೆಂಬರ್ 19 ಶೌರ್ಯ ಮತ್ತು ಧೈರ್ಯದ ಪ್ರತಿರೂಪ ಮತ್ತು ರಾಷ್ಟ್ರ ರಕ್ಷಣೆ ಮತ್ತು ಭಾರತದ ಸ್ವಾತಂತ್ರ್ಯ ಹೋರಾಟದ ಶ್ರೇಷ್ಠ ಪ್ರತೀಕ ರಾಣಿ ಲಕ್ಷ್ಮಿ ಬಾಯಿ ಅವರ ಜನ್ಮದಿನವಾಗಿದೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನಾಳೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಉತ್ತರ ಪ್ರದೇಶ ಸರ್ಕಾರದೊಂದಿಗೆ ರಾಷ್ಟ್ರ ರಕ್ಷಾ ಸಮರ್ಪಣಾ ಪರ್ವ ಆಯೋಜಿಸಲಾಗುತ್ತಿದೆ. ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್, ರಾಜ್ಯಪಾಲ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಇತರ ಗಣ್ಯರು ಇದರಲ್ಲಿ ಉಪಸ್ಥಿತರಿರಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.