ಬೆಂಗಳೂರು: ಖ್ಯಾತ ನಟ, ಸಮಾಜ ಸೇವಕ ದಿವಂಗತ ಪುನೀತ್ ರಾಜ್ಕುಮಾರ್ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದಾರೆ.
ಬಾಲ ನಟನಾಗಿ ಕನ್ನಡ ಸಿನಿಮಾ ರಂಗ ಪ್ರವೇಶಿಸಿ ಬಳಿಕ ನಾಯಕ ನಟನಾಗಿ ಮೆರೆದ ಪುನೀತ್ ರಾಜ್ಕುಮಾರ್ ಅವರು ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದರು. ಮಾತ್ರವಲ್ಲದೇ ಸಮಾಜ ಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದ ಅವರು ಅನಾಥಾಶ್ರಮ, ಗೋಶಾಲೆಗಳನ್ನು ನಡೆಸುತ್ತಿದ್ದರು. ಸಾವಿರಾರು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹಣಕಾಸು ನೆರವು ನೀಡುತ್ತಿದ್ದರು. ಕೊರೋನಾ ಸಂಕಷ್ಟ ಕಾಲದಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ರೂಪಾಯಿ ದೇಣಿಗೆ ನೀಡಿದ್ದರು.
ಅಕ್ಟೋಬರ್ 29ರಂದು ಸಂಭವಿಸಿದ ಅವರ ಅಕಾಲಿಕ ನಿಧನ ಅಪಾರ ಅಭಿಮಾನಿ ಬಳಗ ಮಾತ್ರವಲ್ಲದೇ ಕರುನಾಡಿನ ಸಮಸ್ತರನ್ನೂ ಶೋಕ ಸಾಗರದಲ್ಲಿ ಮುಳುಗುವಂತೆ ಮಾಡಿದೆ.
ಇಂದು ಮುಖ್ಯಮಂತ್ರಿಗಳು ಪುನೀತ್ ರಾಜ್ಕುಮಾರ್ ಅವರ ಗೌರವಾರ್ಥ ʼಕರ್ನಾಟಕ ರತ್ನʼ ಘೋಷಣೆ ಮಾಡಿದ್ದಾರೆ. ಇದು ಮೇರು ನಟ ಮತ್ತು ಸಮಾಜ ಸೇವಕನಿಗೆ ಸಲ್ಲಿಸಲಾದ ಉನ್ನತ ಗೌರವವೇ ಆಗಿದೆ.
"ಕನ್ನಡನಾಡಿನ ಜನಪ್ರಿಯ ಕಲಾವಿದ ದಿವಂಗತ ಶ್ರೀ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ" : ಮುಖ್ಯಮಂತ್ರಿ @BSBommai.#PuneethRajkumar
— CM of Karnataka (@CMofKarnataka) November 16, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.