ನವದೆಹಲಿ : ಕರ್ನಾಟಕದ ಪ್ರಸ್ತಾಪದಂತೆ ಮಹದಾಯಿ ನದಿ ನೀರು ಹಂಚಿಕೆ ವಿವಾದದ ಸಂಬಂಧ ಮೂರು ರಾಜ್ಯಗಳ ಸಭೆ ಕರೆದು ನ್ಯಾಯಾಧೀಕರಣದ ಹೊರಗೆ ಇತ್ಯರ್ಥಪಡಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಮೂರು ರಾಜ್ಯದ ಮುಖ್ಯಮಂತ್ರಿಗಳ ಸಭೆಯನ್ನು ಕರೆಯುದಾಗಿಯೂ ಮೋದಿ ತಿಳಿಸಿದ್ದಾರೆ ಎಂದು ಕೇಂದ್ರ ಸಚಿವ ಅನಂತ ಕುಮಾರ್ ಮತ್ತು ವೆಂಕಯ್ಯ ನಾಯ್ಡು ಮಾಹಿತಿ ನೀಡಿದ್ದಾರೆ.
ಭೇಟಿ ಸಂದರ್ಭ ಪ್ರಧಾನಿ ನರೇಂದ್ರ ಮೋದಿಯವರು ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಅಲ್ಲದೇ ಎರಡು ರಾಜ್ಯಗಳ ಬಿಜೆಪಿ ಮುಖಂಡರೊಂದಿಗೆ ಈ ಬಗ್ಗೆ ನಾವು ಮಾತುಕತೆ ನಡೆಸುತ್ತೆವೆ. ಕಾಂಗ್ರೆಸ್ ನಾಯಕರೊಂದಿಗೆ ನೀವು ಮಾತನಾಡಿ ತದನಂತರ ಮುಖ್ಯಮಂತ್ರಿಗಳ ಮಾತುಕತೆ ನಡೆಸೋಣ ಎಂದು ಅವರು ಹೇಳಿದ್ದಾರೆ ಎಂದು ನಾಯ್ಡು ತಿಳಿಸಿದ್ದಾರೆ.
ಆದರೆ ನಿಯೋಗದಲ್ಲಿದ್ದ ಕೆಲವರು ಇದನ್ನು ತಪ್ಪಾಗಿ ಅರ್ಥೈಸಿ ಜನರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ, ಇದು ಸರಿಯಲ್ಲ ಎಂದು ವೆಂಕಯ್ಯನಾಯ್ಡು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.