ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಈ ತಿಂಗಳ 29 ರಿಂದ ಪ್ರಾರಂಭವಾಗಲಿದ್ದು, ಡಿಸೆಂಬರ್ 23 ರವರೆಗೆ ಮುಂದುವರೆಯಲಿದೆ.
17 ನೇ ಲೋಕಸಭೆಯ 7 ನೇ ಅಧಿವೇಶನವು ನವೆಂಬರ್ 29 ರಂದು ಪ್ರಾರಂಭವಾಗುತ್ತದೆ ಮತ್ತು ಸರ್ಕಾರಿ ವ್ಯವಹಾರದ ಅಗತ್ಯತೆಗಳಿಗೆ ಒಳಪಟ್ಟು, ಅಧಿವೇಶನವು ಡಿಸೆಂಬರ್ 23 ರಂದು ಮುಕ್ತಾಯಗೊಳ್ಳುವ ಸಾಧ್ಯತೆಯಿದೆ ಎಂದು ಲೋಕಸಭೆ ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಿದೆ.
ಈ ಸಂಬಂಧ ರಾಜ್ಯಸಭಾ ಸಚಿವಾಲಯವೂ ಇದೇ ರೀತಿಯ ಹೇಳಿಕೆ ನೀಡಿದೆ.
ಈ ಅಧಿವೇಶನದಲ್ಲೂ ಮಹತ್ವದ ಚರ್ಚೆಗಳು ನಡೆಯುವ ಸಾಧ್ಯತೆ ಇದೆ. ಪ್ರತಿಪಕ್ಷಗಳು ಕಳೆದ ಅಧಿವೇಶನದಂತೆ ಈ ಬಾರಿಯೂ ಸದನದಲ್ಲಿ ಗದ್ದಲ ಎಬ್ಬಿಸಿ ಸರ್ಕಾರದ ಯೋಜನೆಗಳನ್ನು ವಿಫಲಗೊಳಿಸುವ ಸಂಚು ರೂಪಿಸುವುದರಲ್ಲಿ ಅನುಮಾನವಿಲ್ಲ. ಆದರೆ ಪ್ರತಿಪಕ್ಷಗಳ ಸಂಚನ್ನು ಸರ್ಕಾರ ಯಾವ ರೀತಿ ಮೆಟ್ಟಿ ನಿಲ್ಲುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.