ನವದೆಹಲಿ: ಭಾರತದ ವೀರ ವನಿತೆ, ಬ್ರಿಟಿಷರ ವಿರುದ್ಧ ದಿಟ್ಟವಾಗಿ ಹೋರಾಡಿದ ಸಿಂಹಿಣಿ ರಾಣಿ ಲಕ್ಷ್ಮೀಬಾಯಿ ಅವರ ಜನ್ಮದಿನವನ್ನು ಇಂದು ಆಚರಿಸಲಾಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಣಿ ಲಕ್ಷ್ಮೀಬಾಯಿ ಅವರ ಜಯಂತಿಯಂದು ಅವರಿಗೆ ನಮನ ಸಲ್ಲಿಸಿದರು.
ಈ ಕುರಿತು ಟ್ವೀಟ್ ಮಾಡಿರುವ ಮೋದಿ, “ಭಾರತದ ಇತಿಹಾಸದಲ್ಲಿ ರಾಣಿ ಲಕ್ಷ್ಮೀಬಾಯಿ ಅವರಿಗೆ ವಿಶೇಷ ಸ್ಥಾನವಿದೆ. ಆಕೆಯ ಶೌರ್ಯವನ್ನು ಮುಂದಿನ ತಲೆಮಾರುಗಳು ಎಂದಿಗೂ ಮರೆಯುವುದಿಲ್ಲ” ಎಂದು ಪ್ರಧಾನಿ ಹೇಳಿದ್ದಾರೆ.
ಭಾರತದ ರಕ್ಷಣಾ ವಲಯಕ್ಕೆ ಉತ್ತೇಜನ ನೀಡುವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಇಂದು ಝಾನ್ಸಿಗೆ ಭೇಟಿ ನೀಡಲು ಎದುರು ನೋಡುತ್ತಿದ್ದೇನೆ ಎಂದು ಮೋದಿ ಹೇಳಿದ್ದಾರೆ.
ರಾಣಿ ಲಕ್ಷ್ಮೀಬಾಯಿಯವರು 19 ನವೆಂಬರ್1829ರಲ್ಲಿ ಕಾಶಿ ವಾರಣಾಸಿ ಒಂದು ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದರು. ಮಣಿಕರ್ಣಿಕ ಅವರ ನಿಜವಾದ ಹೆಸರಾಗಿದೆ.
I bow to the valorous Rani Lakshmibai on her Jayanti. She has a special place in the history of India. Her bravery will not be forgotten by generations. I look forward to being in Jhansi later today to attend programmes relating to boosting India’s defence sector.
— Narendra Modi (@narendramodi) November 19, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.