ನವದೆಹಲಿ: 2021 ನೇ ಸಾಲಿನ ಭಾರತೀಯ ಚಲನಚಿತ್ರ ವ್ಯಕ್ತಿ ಪ್ರಶಸ್ತಿಯನ್ನು ಬಾಲಿವುಡ್ ಹಿರಿಯ ನಟಿ ಹೇಮಾ ಮಾಲಿನಿ ಮತ್ತು ಪ್ರಸೂನ್ ಜೋಶಿ ಅವರಿಗೆ ನೀಡಲಾಗುವುದು ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಘೋಷಿಸಿದ್ದಾರೆ.
ಪ್ರಶಸ್ತಿಗಳನ್ನು ಪ್ರಕಟಿಸಿದ ಠಾಕೂರ್ ಅವರು “ಉತ್ತರ ಪ್ರದೇಶದ ಮಥುರಾ ಸಂಸದರಾದ ನಟಿ ಹೇಮಾ ಮಾಲಿನಿ ಮತ್ತು ಗೀತರಚನೆಕಾರ ಮತ್ತು ಸಿ ಬಿ ಎಫ್ ಸಿ ಅಧ್ಯಕ್ಷರಾದ ಪ್ರಸೂನ್ ಜೋಶಿ ಅವರನ್ನು 2021 ನೇ ವರ್ಷದ ಭಾರತೀಯ ಚಲನಚಿತ್ರ ವ್ಯಕ್ತಿಗಳು ಎಂದು ಘೋಷಿಸಲು ನನಗೆ ಸಂತೋಷವಾಗಿದೆ” ಎಂದರು.
ಭಾರತೀಯ ಸಿನಿಮಾ ಕ್ಷೇತ್ರಕ್ಕೆ ದಶಕಗಳಿಂದ ಅವರು ಕೊಡುಗೆ ನೀಡಿದ್ದಾರೆ ಮತ್ತು ಅವರ ಕೆಲಸವು ತಲೆಮಾರುಗಳಾದ್ಯಂತ ಪ್ರೇಕ್ಷಕರನ್ನು ಆಕರ್ಷಿಸಿದೆ. ಅವರು ವಿಶ್ವದಾದ್ಯಂತ ಮೆಚ್ಚುವ ಮತ್ತು ಗೌರವಿಸುವ ಭಾರತೀಯ ಚಿತ್ರರಂಗದ ಐಕಾನ್ಗಳಾಗಿದ್ದಾರೆ. ಅವರಿಗೆ ಗೋವಾದಲ್ಲಿ ನಡೆಯುವ 52 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಈ ಗೌರವವನ್ನು ಪ್ರದಾನ ಮಾಡಲಾಗುತ್ತದೆ ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.