
ನವದೆಹಲಿ: ಆಜಾದಿ ಕಾ ಅಮೃತ ಮಹೋತ್ಸವದ ಸಂದರ್ಭದಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಪ್ರಕಾಶನ ವಿಭಾಗ ಸ್ವಾತಂತ್ರ್ಯ ಸೇನಾನಿಗಳ ಕುರಿತು ಕನ್ನಡ ಭಾಷೆಯ ಹಲವು ಪುಸ್ತಕಗಳನ್ನು ಹೊರತಂದಿರುವ ಬಗ್ಗೆ ನಿವೃತ್ತ ಐಎಸ್ ಅಧಿಕಾರಿ, ಯುನೆಸ್ಕೋದ ಮಾಜಿ ರಾಯಭಾರಿ ಹಾಗೂ ಚಿಂತಕ ಚಿರಂಜೀವಿ ಸಿಂಗ್ ಪ್ರಸಂಶೆ ವ್ಯಕ್ತಪಡಿಸಿದ್ದಾರೆ.
ಪ್ರಕಾಶನ ವಿಭಾಗ ಹಿಂದಿ ಮತ್ತು ಇಂಗೀಷ್ ಭಾಷೆಯ ಕೃತಿಗಳನ್ನು ಕನ್ನಡ ಭಾಷೆಯಲ್ಲಿ ಪಂಜಾಬ್ ಕೇಸರಿ ಲಾಲ ಲಜಪತ್ ರಾಯ್, ಮದನ್ ಮೋಹನ್ ಮಾಳವೀಯ, ಬಾಲ ಗಂಗಾಧರ ತಿಲಕ್, ಲಾಲ್ ಬಹದ್ದೂರ್ ಶಾಸ್ತ್ರಿ, ಝಾನ್ಸಿ ರಾಣಿ ಲಕ್ಷ್ಮೀಬಾಯಿ ಮತ್ತಿತರ ಸ್ವಾತಂತ್ರ್ಯ ಸೇನಾನಿಗಳ ಕುರಿತಾದ ಕೃತಿಗಳನ್ನು ಪ್ರಕಟಿಸಿ ಅವುಗಳನ್ನು ಜನರಿಗೆ ತಲುಪಿಸುತ್ತಿರುವ ಕಾರ್ಯ ಸ್ವಾಗತಾರ್ಹ ಎಂದರು.
ಪ್ರಕಾಶನಾ ವಿಭಾಗದ ಕೃತಿಗಳು ಗುಣಮಟ್ಟದ ವಿಷಯಗಳನ್ನು ಜನತೆಗೆ ತಲುಪಿಸಲಿ ಸಾಕಷ್ಟು ಶ್ರಮಿಸುತ್ತಿದೆ. ಅತ್ಯುತ್ತಮ ಪ್ರಕಟಣೆಗಳನ್ನು ಹೊರತಂದಿದ್ದು, ಆ ಮೂಲಕ ಉತ್ತಮ ಮೌಲಿಕ ಸಾಹಿತ್ಯವನ್ನು ಪ್ರಾದೇಶಿಕ ಭಾಷೆಗಳಲ್ಲಿ ಜನರಿಗೆ ತಲುಪಿಸುತ್ತಿರುವುದು ಅತ್ಯಂತ ಪ್ರಶಂಸನಾರ್ಹ ಎಂದರು.
ಕರ್ನಾಟಕದ ಸ್ವಾತಂತ್ರ್ಯ ಸೇನಾನಿಗಳಾದ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಹಾಗೂ ಇತರರ ಸ್ವಾತಂತ್ರ್ಯ ಹೋರಾಟಗಾರರ ಚರಿತ್ರೆ ಹಾಗೂ ಕೊಡುಗೆಯನ್ನು ಅನ್ಯ ಭಾಷಿಕರಿಗೂ ತಲುಪುವಂತೆ ಮಾಡಬೇಕೆಂದು ಅವರು ಸಲಹೆ ನೀಡಿದರು.
ಪ್ರಕಾಶನ ವಿಭಾಗ ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಓದುಗರಿಗೆ ತಲುಪಿಸುತ್ತಿರುವ ಕಾರ್ಯ ಪ್ರಸಂಶಿಸಿದ ಅವರು ಮುಂದಿನ ದಿನಗಳಲ್ಲಿ ಇನ್ನೂ ಉತ್ತಮ ಗುಣಮಟ್ಟದ ಕೃತಿಗಳು ಪ್ರಾದೇಶಿಕ ಭಾಷೆಯಲ್ಲಿ ತರುವಂತೆ ಆಶಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


