ಮಂಡ್ಯ: ವಿಧಾನ ಪರಿಷತ್ ಚುನಾವಣೆ ಹಾಗೂ ಪಕ್ಷ ಸಂಘಟನೆಯಲ್ಲಿ ರಾಜ್ಯ ಬಿಜೆಪಿ ವತಿಯಿಂದ ಹಮ್ಮಿಕೊಂಡಿರುವ ಜನಸ್ವರಾಜ್ ಸಮಾವೇಶ ಇಂದು ಮಂಡ್ಯ ಜಿಲ್ಲೆಯಲ್ಲಿ ಅದ್ದೂರಿಯಾಗಿ ನೆರವೇರಿತು.
ಈ ವೇಳೆ ಮಾತನಾಡಿದ ಸಚಿವ ಡಾ.ನಾರಾಯಣಗೌಡ, ಬಿಜೆಪಿ ಸರ್ಕಾರದಲ್ಲಿ ಮಂತ್ರಿಯಾಗಿ ಉತ್ತಮ ಕೆಲಸ ಮಾಡುವುದಕ್ಕೆ ನನಗೆ ಅವಕಾಶ ಸಿಕ್ಕಿದೆ. ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಬದ್ದವಾಗಿದ್ದೇನೆ. ವಿಧಾನಪರಿಷತ್ ಚುನಾವಣೆಯಲ್ಲಿ ಬೂಕನಹಳ್ಳಿ ಮಂಜು ಅವರನ್ನು ಗೆಲ್ಲಿಸಿದರೇ ಮಂಡ್ಯ ಜಿಲ್ಲೆ ಅಭಿವೃದ್ಧಿಗೆ ಮತ್ತಷ್ಟು ಅನುಕೂಲ ಆಗಲಿದೆ ಎಂದರು.
ಮಂಡ್ಯದಲ್ಲಿ ಬಿಜೆಪಿ ಒಂದು ಸೀಟ್ ಗೆಲ್ಲೋಕೆ ಆಗಲ್ಲ ಅಂತಾ ಅಂತಿದ್ದರು. ಆದರೆ ಇವತ್ತು ಮಂಡ್ಯದಲ್ಲಿ ಬಿಜೆಪಿ ಗೆಲ್ಲುವ ಮೂಲಕ ವಿರೋಧಿಗಳಿಗೆ ತಕ್ಕ ಉತ್ತರ ನೀಡಿದ್ದಾರೆ ಎಂದು ಸಚಿವ ಡಾ.ನಾರಾಯಣಗೌಡ ಅವರು ವಿಪಕ್ಷಗಳಿಗೆ ಟಾಂಗ್ ನೀಡಿದರು.
ನಮ್ಮ ಮಂಡ್ಯ ಜಿಲ್ಲೆಯ ಅಭಿವೃದ್ಧಿ ನಮ್ಮ ನಮ್ಮ ಸರ್ಕಾರ ಬದ್ದವಾಗಿದ್ದು, ಈಗಾಗಲೇ 3 ಸಾವಿರ ಕೋಟಿಗೂ ಹೆಚ್ಚು ಅನಾದಾನ ನೀಡಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.
ಮೈಷುಗರ್ ಸಕ್ಕರೆ ಕಾರ್ಖಾನೆಯನ್ನು, ಪಾಂಡವಪುರ ಸಕ್ಕರೆ ಕಾರ್ಖಾನೆಯನ್ನು ನಿಲ್ಲಿಸಿದ್ದವರು ಯಾರು..? ಆದರೆ, ನಮ್ಮ ಸರ್ಕಾರ ಪಾಂಡವಪುರ ಸಕ್ಕರೆ ಕಾರ್ಖಾನೆಯನ್ನು ಈಗಾಗಲೇ ಆರಂಭ ಮಾಡಿದೆ. ಮೈಷುಗರ್ ಕಾರ್ಖಾನೆ ಆರಂಭ ಮಾಡಲು ನಮ್ಮ ಸರ್ಕಾರದಿಂದ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ. ನಮ್ಮ ಸರ್ಕಾರ ಅಭಿವೃದ್ಧಿ ಪರ ಕೆಲಸಗಳನ್ನ ಕೈಗೊಂಡಿದೆ ಎಂದರು.
ನಮ್ಮ ಜಿಲ್ಲೆಯಲ್ಲಿ ಯಾರು ಹೆದರುವ ಅಗತ್ಯ ಇಲ್ಲ. ಹಿಂದೆ ನಡೆಯುತ್ತಿದ್ದ ಗೂಂಡಾಗಿರಿಗೆ ಈಗ ಅವಕಾಶ ಇಲ್ಲ. ಎಲ್ಲವನ್ನೂ ಬಂದ್ ಮಾಡಲಾಗಿದೆ ಎಂದು ವಿರೋಧಿಗಳ ವಿರುದ್ಧ ಸಚಿವ ಡಾ.ನಾರಾಯಣಗೌಡ ಗುಡುಗಿದರು.
ಕಾಂಗ್ರೆಸ್, ಜೆಡಿಎಸ್ನವರಿಗೆ ಏನು ಕೆಲಸ ಇಲ್ಲ.. ಅದಕ್ಕೆ ಸುಮ್ಮನೆ ಮಾತನಾಡುತ್ತಾರೆ. ನಮಗೆ ಕೆಲಸ ಇದೆ, ನಾವು ಕೆಲಸ ಮಾಡುತ್ತಿದ್ದೇವೆ. ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಎಲ್ಲರೂ ಸೇರಿ ಹಗಲು ರಾತ್ರಿ ಕೆಲಸ ಮಾಡೋಣ. ಪರಿಷತ್ ಚುನಾವಣೆಯಲ್ಲಿ ಮಂಜು ಅವರನ್ನು ಗೆಲ್ಲಿಸುವ ಮೂಲಕ ಪಕ್ಷಕ್ಕೆ ಮತ್ತಷ್ಟು ಬಲ ತುಂಬೋಣ ಎಂದು ಎಂದು ಸಚಿವ ಡಾ.ನಾರಾಯಣಗೌಡ ಅವರು ಕರೆ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.