ಬೆಂಗಳೂರು: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ರೋಸೆನ್ಬೌರ್ ಫೈರ್ ಫೈಟಿಂಗ್ ಸಿಮ್ಯುಲೇಟರ್ (Rosenbauer firefighting simulator) ನಿಯೋಜನೆ ಮಾಡಲಾಗಿದ್ದು, ಈ ಮೂಲಕ ವಿಮಾನ ನಿಲ್ದಾಣ ಮತ್ತೊಂದು ಅಂತಾರಾಷ್ಟ್ರೀಯ ಹಿರಿಮೆಗೆ ಪಾತ್ರವಾಗಿದೆ.
ರೋಸೆನ್ಬೌರ್ ಫೈರ್ ಫೈಟಿಂಗ್ ಸಿಮ್ಯುಲೇಟರ್ ವ್ಯವಸ್ಥೆ ಹೊಂದಿದ ದಕ್ಷಿಣ ಏಷ್ಯಾದ ಮೊದಲ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪಾತ್ರವಾಗಿದೆ.
ವಿಮಾನಿಲ್ದಾಣದಲ್ಲಿ ಸಂಭವಿಸುವ ಅಗ್ನಿ ಅವಘಡವನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಲು ಇದೇ ಮೊದಲ ಬಾರಿಗೆ “ರೋಸೆನ್ಬೌರ್ ಫೈರ್ಫೈಟಿಂಗ್ ಸಿಮ್ಯುಲೇಟರ್” ಅನ್ನು ಪರಿಚಯಿಸಲಾಗಿದೆ.
ಇದೊಂದು ಅತ್ಯಾಧುನಿಕ ಅಗ್ನಿಶಾಮಕ ತಂತ್ರಜ್ಞಾನವಾಗಿದ್ದು, ಯಾವುದೇ ರೀತಿಯ ಅಗ್ನಿ ಅವಘಡ ಸಂಭವಿಸಿದರೂ ತಕ್ಷಣ ಅದನ್ನು ಆರಿಸುವ ಕೆಲಸದಲ್ಲಿ ನಿಪುಣತೆ ಹೊಂದಿದೆ. ವಿಮಾನ ನಿಲ್ದಾಣ ಅಥವಾ ವಿಮಾನಗಳ ಅಪಘಾತದ ಸಂದರ್ಭದಲ್ಲಿ ಹೊತ್ತಿಕೊಳ್ಳುವ ಅಗ್ನಿ ಅವಘಡವನ್ನು ತುರ್ತಾಗಿ ಆರಿಸುವಲ್ಲಿ ಈ ಅತ್ಯಾಧುನಿಕ ಸಿಮ್ಯುಲೇಟರ್ ಕೆಲಸ ಮಾಡಲಿದೆ.
ಈ ಅತ್ಯಾಧುನಿಕ ತಂತ್ರಜ್ಞಾನದ ಅಗ್ನಿಶಾಮಕವನ್ನು ಭಾರತದ ಯಾವುದೇ ವಿಮಾನ ನಿಲ್ದಾಣ ತಂಡ ಇಲ್ಲಿಗೆ ಆಗಮಿಸಿ ಇದರ ತರಬೇತಿ ಪಡೆಯಲು ಸಹ ಮುಕ್ತ ಅವಕಾಶವನ್ನು ಒದಗಿಸಿಕೊಡಲಾಗಿದೆ.
ರೋಸನ್ಬೌರ್ ಸಿಮ್ಯುಲೇಟರ್ನ ಎರಡು ಫ್ಯಾಂಥರ್ನಲ್ಲಿ 6 ಟ್ರಕ್ಗಳು, ಹಾಗೂ 8 ಟ್ರಕ್ಗಳನ್ನು ಇರಿಸಲಾಗಿದೆ. ಈ ಟ್ರಕ್ಗಳು ಎರಡು ಹೈರೀಚ್ ಎಕ್ಸ್ಟೆಂಡೆಬಲ್ ಟರೆಟ್ಸ್ (ಎಚ್ಆರ್ಇಟಿ)ಯನ್ನು ಒಳಗೊಂಡಿದೆ.
We’re the first airport in South Asia to commission a #Rosenbauer Tactical Simulator. With this #simulator our #firefighters can train for complex fire emergencies in a realistic & interactive manner. Read on https://t.co/1cmCHlMXt4 #firefighter #bengaluru #training #BLRAirport pic.twitter.com/z76K30svr4
— BLR Airport (@BLRAirport) November 22, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.