
ನವದೆಹಲಿ: ಔಷಧ ವಲಯದ ಉತ್ಪಾದನಾ ಸಂಪರ್ಕಿತ ಪ್ರೋತ್ಸಾಹಕ ಯೋಜನೆಗೆ ಔಷಧ ಉದ್ಯಮದವರಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಯೋಜನೆಯಡಿ 55 ಫಾರ್ಮಾ ಕಂಪನಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯ ತಿಳಿಸಿದೆ.
ಇದು ಔಷಧೀಯ ಉದ್ಯಮದಿಂದ ಹೂಡಿಕೆಯನ್ನು ಆಕರ್ಷಿಸುತ್ತದೆ ಎಂದು ನಿರೀಕ್ಷಿಸಲಾಗಿದೆ. ಹೂಡಿಕೆ ಮತ್ತು ಉತ್ಪಾದನೆಯನ್ನು ಹೆಚ್ಚಿಸುವ ಮೂಲಕ ಭಾರತದ ಉತ್ಪಾದನಾ ಸಾಮರ್ಥ್ಯಗಳನ್ನು ಹೆಚ್ಚಿಸುವುದು ಉತ್ಪಾದನಾ ಸಂಪರ್ಕಿತ ಪ್ರೋತ್ಸಾಹಕ ಯೋಜನೆಯ ಉದ್ದೇಶವಾಗಿದೆ.
ಉದ್ಯಮದವರ ನಡುವೆ ನ್ಯಾಯಯುತ ಸ್ಪರ್ಧೆ ಮತ್ತು ವಿಶಾಲ ವ್ಯಾಪ್ತಿಯನ್ನು ಖಚಿತಪಡಿಸಿಕೊಳ್ಳಲು ಮೂರು ವಿಭಿನ್ನ ವಿಭಾಗಗಳಲ್ಲಿ ಫಾರ್ಮಾ ಉದ್ಯಮಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಯೋಜನೆಯು ಮೂರು ವಿಭಿನ್ನ ಉತ್ಪನ್ನ ವಿಭಾಗಗಳನ್ನು ಒಳಗೊಂಡಿದೆ, ಇದಕ್ಕಾಗಿ ಅರ್ಜಿದಾರರು ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಉತ್ಪನ್ನಗಳು ನಾವೀನ್ಯತೆ, ಸಂಶೋಧನೆ ಮತ್ತು ಅಭಿವೃದ್ಧಿ ಮತ್ತು ಭಾರತದ ಔಷಧೀಯ ಉದ್ಯಮದ ಉತ್ಪನ್ನ ಪ್ರೊಫೈಲ್ ಅನ್ನು ವಿಸ್ತರಿಸಲು ಉತ್ತೇಜನ ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ.
ಅರ್ಜಿ ಸಲ್ಲಿಸಿದ ಫಾರ್ಮಾ ಕಂಪನಿಗಳ ಪೈಕಿ 55 ಕಂಪನಿಗಳನ್ನು ಉತ್ಪಾದನಾ ಸಂಪರ್ಕಿತ ಪ್ರೋತ್ಸಾಹಕ ಯೋಜನೆಗೆ ಆಯ್ಕೆ ಮಾಡಲಾಗಿದೆ ಎಂದು ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


