
ನವದೆಹಲಿ: ಡಿಸೆಂಬರ್ 15 ರಿಂದ ನಿಗದಿತ ವಾಣಿಜ್ಯ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳನ್ನು ಪುನರಾರಂಭಿಸಲು ಕೇಂದ್ರ ನಿರ್ಧರಿಸಿದೆ. ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ, ನಿಗದಿತ ಅಂತರರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕ ಸೇವೆಗಳನ್ನು ಭಾರತವು ಕಳೆದ ವರ್ಷ ಮಾರ್ಚ್ 23 ರಂದು ಸ್ಥಗಿತಗೊಳಿಸಿತ್ತು.
ಪ್ರಯಾಣಿಕ ವಿಮಾನಗಳನ್ನು ಪುನರಾರಂಭಿಸುವ ಬಗ್ಗೆ ಪರಿಶೀಲಿಸಲಾಗಿದೆ ಮತ್ತು ಮುಂದಿನ ತಿಂಗಳು 15 ರಿಂದ ಜಾರಿಗೆ ಬರುವಂತೆ ಭಾರತಕ್ಕೆ ಮತ್ತು ಭಾರತದಿಂದ ನಿಗದಿತ ವಾಣಿಜ್ಯ ಅಂತರರಾಷ್ಟ್ರೀಯ ಪ್ರಯಾಣಿಕ ವಿಮಾನಗಳನ್ನು ಪುನರಾರಂಭಿಸಲು ನಿರ್ಧರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ತಿಳಿಸಿದೆ.
ಡಿಸೆಂಬರ್ 14 ರವರೆಗೆ ಸೇವೆಗಳು ಸ್ಥಗಿತವಾಗಿರಲಿದೆ. 15ರಿಂದ ಆರಂಭವಾಗಲಿದೆ. ನಿಗದಿತ ಅಂತರಾಷ್ಟ್ರೀಯ ಪ್ರಯಾಣಿಕ ಸೇವೆಗಳ ಪುನರಾರಂಭವು ದ್ವಿಪಕ್ಷೀಯವಾಗಿ ಒಪ್ಪಿದ ಸಾಮರ್ಥ್ಯದ ಅರ್ಹತೆಗಳಿಗೆ ಪರಿಷ್ಕರಣೆ ಮತ್ತು ಏರ್ ಬಬಲ್ ವ್ಯವಸ್ಥೆಗಳ ಮುಕ್ತಾಯವನ್ನು ಸೂಚಿಸುತ್ತದೆ ಎಂದು ಅದು ಹೇಳಿದೆ.
ಪ್ರಪಂಚದಾದ್ಯಂತ ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಆರೋಗ್ಯ ಸಚಿವಾಲಯದೊಂದಿಗೆ ಸಮಾಲೋಚಿಸಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


