ಬೆಂಗಳೂರು: ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರು ಹಿಂದೆ ಜನತಾದಳದಲ್ಲಿದ್ದಾಗ ಇಂದಿರಾ ಗಾಂಧಿ ಅವರು ತುರ್ತು ಪರಿಸ್ಥಿತಿ ಘೋಷಿಸಿದಾಗ ಅದನ್ನು ಸಂಪೂರ್ಣವಾಗಿ ವಿರೋಧಿಸಿದ್ದರು. ಕಾಂಗ್ರೆಸ್ಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ. ಅವರು ಸಂವಿಧಾನ ವಿರೋಧಿಗಳು ಎಂದು ಮಾತನಾಡಿದ್ದರು ಎಂದು ಬಿಜೆಪಿ ರಾಜ್ಯ ವಕ್ತಾರರು ಮತ್ತು ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷರಾದ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ.
ಬಿಜೆಪಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ ಎಂದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಕಾಂಗ್ರೆಸ್ ಪಕ್ಷ ಸೇರಿದವರು. ಅದಕ್ಕೆ ಮುಂಚೆ ಅವರು ಬೇರೆ ಕಡೆ ಇದ್ದರು. ಸಿದ್ದರಾಮಯ್ಯ ಒಬ್ಬ ಡೋಂಗಿ ರಾಜಕಾರಣಿ. ಅವರು ಕಾಂಗ್ರೆಸ್ ಪಕ್ಷಕ್ಕೆ ಹೊಟ್ಟೆಪಾಡಿಗಾಗಿ ಹೋದವರು ಎಂದು ಟೀಕಿಸಿದ್ದಾರೆ.
ಸಿದ್ದರಾಮಯ್ಯ ಅವರು ಇತ್ತೀಚೆಗೆ ಕಾಂಗ್ರೆಸ್ಸನ್ನು ಹೊಗಳಲು ಆರಂಭಿಸಿದ್ದಾರೆ. ಸಂವಿಧಾನವನ್ನೇ ತಿರುಚಿ ತುರ್ತು ಪರಿಸ್ಥಿತಿ ಜಾರಿಗೊಳಿಸಿದ್ದನ್ನು ಇವರು ಒಪ್ಪುತ್ತಾರಾ ಎಂದೂ ಛಲವಾದಿ ನಾರಾಯಣಸ್ವಾಮಿ ಅವರು ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯ ಬದ್ಧತೆ ಇಲ್ಲದ ಸಮಯಸಾಧಕ ರಾಜಕಾರಣಿ ಎಂದು ಅವರು ಛೇಡಿಸಿದ್ದಾರೆ.. ಕೇವಲ ಹೊಟ್ಟೆಪಾಡಿಗಾಗಿ ಅವರು ಕಾಂಗ್ರೆಸ್ ಪಕ್ಷ ಸೇರಿದ್ದಾರೆ ಎಂದು ಆರೋಪಿಸಿದ್ದಾರೆ.
ಪ್ರಧಾನಿಗಳಾದ ನರೇಂದ್ರ ಮೋದಿಯವರ ಭಾಷಣದ ವೇಳೆ ಸಂವಿಧಾನ ದಿನವನ್ನೇ ಕಾಂಗ್ರೆಸ್ ಬಹಿಷ್ಕರಿಸಿದೆ. ಸಿದ್ದರಾಮಯ್ಯ ಅವರೂ ಸಂವಿಧಾನ ದಿನದ ಬಗ್ಗೆ ಆಕ್ಷೇಪಿಸಿದ್ದಾರೆ. ಇದು ಕಾಂಗ್ರೆಸ್ ಪಕ್ಷ ಸಂವಿಧಾನವಿರೋಧಿ ಎಂಬುದಕ್ಕೆ ಸ್ಪಷ್ಟ ಉದಾಹರಣೆ ಎಂದು ಅವರು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದವರಿಗೆ ಸಂವಿಧಾನದ ಮೇಲೆ ಗೌರವವಿಲ್ಲ. ಸಂವಿಧಾನಕರ್ತೃ ಬಾಬಾಸಾಹೇಬ್ ಡಾ. ಅಂಬೇಡ್ಕರ್ ಅವರಿಗೂ ಕಾಂಗ್ರೆಸ್ ಪಕ್ಷದವರು ಗೌರವ ನೀಡಿದವರಲ್ಲ. ಕಾಂಗ್ರೆಸ್ ನಿಷ್ಠೆ ಭಾರತಕ್ಕೆ ಇದೆಯೇ ಅಥವಾ ಬೇರೆ ದೇಶಕ್ಕೆ ಅವರ ನಿಷ್ಠೆಯೇ ಎಂಬುದನ್ನು ಕಾಂಗ್ರೆಸ್ ಮುಖಂಡರು ಸ್ಪಷ್ಟಪಡಿಸಲಿ ಎಂದು ಅವರು ಆಗ್ರಹಿಸಿದ್ದಾರೆ.
ದೇಶದ ಸಂಸ್ಕøತಿಯನ್ನೂ ಕಾಂಗ್ರೆಸ್ ಗೌರವಿಸುತ್ತಿಲ್ಲ. ದಲಿತರನ್ನೂ ಕಾಂಗ್ರೆಸ್ ಪಕ್ಷದವರು ಕೇವಲ ಮತಬ್ಯಾಂಕ್ ರಾಜಕೀಯಕ್ಕೆ ಬಳಸಿಕೊಂಡವರು. ಕಾಂಗ್ರೆಸ್ ಪಕ್ಷ ಅವನತಿಯತ್ತ ನಡೆಯುತ್ತಿರುವುದರ ಸ್ಪಷ್ಟ ಸಂದೇಶ ಇದಾಗಿದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.