ನವದೆಹಲಿ: ನಾಪತ್ತೆಯಾಗಿ ಎಲ್ಲರ ಕುತೂಹಲ ಕೆರಳಿಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಎ.19ರಂದು ರೈತ ಸಮಾವೇಶವದಲ್ಲಿ ಪಾಲ್ಗೊಳ್ಳುವ ಮೂಲಕ 2 ತಿಂಗಳ ಬಳಿಕ ಸಾರ್ವಜನಿಕವಾಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಭೂಸ್ವಾಧೀನ ಮಸೂದೆಯನ್ನು ಇಟ್ಟುಕೊಂಡು ನರೇಂದ್ರ ಮೋದಿಯವರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ತಂತ್ರಗಾರಿಕೆ ರೂಪಿಸಿರುವ ಕಾಂಗ್ರೆಸ್ ಬೃಹತ್ ರೈತ ಸಮಾವೇಶವನ್ನು ಏರ್ಪಡಿಸಲು ನಿರ್ಧರಿಸಿದೆ. ಇದರಲ್ಲಿ ರಾಹುಲ್ ಗಾಂಧಿ ಭಾಗವಹಿಸುವುದು ಬಹುತೇಕ ಖಚಿತವಾಗಿದೆ.
ಈ ಸಮಾವೇಶಕ್ಕೆ ಲಕ್ಷಾಂತರ ರೈತರು ಆಗಮಿಸಲಿದ್ದಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಭಾಷಣ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.