
ನವದೆಹಲಿ: ಭಾರತೀಯ ನೌಕಾ ಪಡೆಯ ನೂತನ ಮುಖ್ಯಸ್ಥರಾಗಿ ವೈಸ್ ಅಡ್ಮಿರಲ್ ಆರ್ ಹರಿ ಕುಮಾರ್ ಅವರು ಇಂದು ಅಧಿಕಾರ ವಹಿಸಿಕೊಂಡಿದ್ದಾರೆ.
30 ತಿಂಗಳ ಅಧಿಕಾರಾವಧಿಯ ನಂತರ ನಿವೃತ್ತಿ ಹೊಂದುತ್ತಿರುವ ಅಡ್ಮಿರಲ್ ಕರಮ್ ಬೀರ್ ಸಿಂಗ್ ಅವರಿಂದ ವೈಸ್ ಅಡ್ಮಿರಲ್ ಆರ್ ಹರಿ ಕುಮಾರ್ ಅವರು ಭಾರತೀಯ ನೌಕಾ ಪಡೆಯ ಮುಖ್ಯಸ್ಥರಾಗಿ ಮಂಗಳವಾರ ಅಧಿಕಾರ ವಹಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇಂಟಿಗ್ರೇಟೆಡ್ ಡಿಫೆನ್ಸ್ ಸ್ಟಾಫ್ ಪ್ರಧಾನ ಕಛೇರಿಯ ಭಾಗವಾಗಿ ಥಿಯೇಟರ್ ಕಮಾಂಡ್ ರಚನೆಗಳಲ್ಲಿ ಕುಮಾರ್ ನಿರ್ಣಾಯಕ ಪಾತ್ರವನ್ನು ವಹಿಸಿದ್ದಾರೆ. ಏಪ್ರಿಲ್ 12, 1962 ರಂದು ಜನಿಸಿದ ವೈಸ್ ಅಡ್ಮಿರಲ್ ಆರ್ ಹರಿ ಕುಮಾರ್ ಅವರು ಜನವರಿ 1, 1983 ರಂದು ಭಾರತೀಯ ನೌಕಾಪಡೆಯ ಕಾರ್ಯನಿರ್ವಾಹಕ ಶಾಖೆಗೆ ನೇಮಕಗೊಂಡರು.
ಸುಮಾರು 39 ವರ್ಷಗಳ ಕಾಲ ಅವರ ಸುದೀರ್ಘ ಮತ್ತು ವಿಶಿಷ್ಟ ಸೇವೆಯನ್ನು ಸಲ್ಲಿಸಿರುವ ಅವರು, ವಿವಿಧ ಕಮಾಂಡ್, ಸಿಬ್ಬಂದಿ ಮತ್ತು ಬೋಧನಾ ನೇಮಕಾತಿಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ವೈಸ್ ಅಡ್ಮಿರಲ್ ಆರ್ ಹರಿ ಕುಮಾರ್ ಅವರ ಸಮುದ್ರ ಕಮಾಂಡ್ನಲ್ಲಿ ಐಎನ್ಎಸ್ ನಿಶಾಂಕ್, ಮಿಸೈಲ್ ಕಾರ್ವೆಟ್, ಐಎನ್ಎಸ್ ಕೋರಾ ಮತ್ತು ಗೈಡೆಡ್ ಮಿಸೈಲ್ ಡೆಸ್ಟ್ರಾಯರ್ ಐಎನ್ಎಸ್ ರಣವೀರ್ ಸೇರಿವೆ.
Admiral R Hari Kumar, PVSM, AVSM, VSM, ADC assumes charge as the 25th Chief of the Naval Staff #CNS.#IndianNavy@rashtrapatibhvn @PMOIndia @DefenceMinIndia @HQ_IDS_India @SpokespersonMoD @PIB_India @DG_PIB @DDNational @airnewsalerts pic.twitter.com/G8yYO3fupu
— SpokespersonNavy (@indiannavy) November 30, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


