
ನವದೆಹಲಿ: ಭಾರತದ ಒಟ್ಟು ದೇಶೀಯ ಉತ್ಪನ್ನ ಜಿಡಿಪಿ ಪ್ರಸಕ್ತ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ ವಿಶ್ವದ ಪ್ರಮುಖ ಆರ್ಥಿಕತೆಗಳ ಪೈಕಿ ಅತ್ಯಂತ ವೇಗದ ಬೆಳವಣಿಗೆಯನ್ನು ದಾಖಲಿಸಿದೆ.
ನಿನ್ನೆ ಬಿಡುಗಡೆಯಾದ ಸರ್ಕಾರದ ಅಂಕಿಅಂಶಗಳ ಪ್ರಕಾರ, ದೇಶದ ಜಿಡಿಪಿ ಶೇಕಡಾ 8.4 ರಷ್ಟು ಹೆಚ್ಚಾಗಿದೆ.
ರಾಷ್ಟ್ರೀಯ ಅಂಕಿಅಂಶಗಳ ಕಚೇರಿ NSOಮಾಹಿತಿಯ ಪ್ರಕಾರ, ಈ ಅವಧಿಯಲ್ಲಿ ಉತ್ಪಾದನೆ ಶೇ.5.5ರಷ್ಟು ಹೆಚ್ಚಾಗಿದೆ. ಎರಡನೇ ತ್ರೈಮಾಸಿಕದಲ್ಲಿ ನಿರ್ಮಾಣ ವಿಭಾಗವು ಶೇ.7.5 ರಷ್ಟು ಬೆಳೆದಿದೆ.
ಕೋವಿಡ್ -19 ಸಾಂಕ್ರಾಮಿಕದ ಎರಡನೇ ಅಲೆಯ ಹೊರತಾಗಿಯೂ FY22 ರ ಎರಡನೇ ತ್ರೈಮಾಸಿಕದಲ್ಲಿ, ಜುಲೈ-ಸೆಪ್ಟೆಂಬರ್ನಲ್ಲಿ ಮನೆ ಬಳಕೆಗಳ ಬೇಡಿಕೆ ಏರಿದೆ ಎಂದು NSO ಡೇಟಾ ಸೂಚಿಸುತ್ತದೆ. ಮುಂದಿನ ತಿಂಗಳುಗಳಲ್ಲಿ ಗ್ರಾಹಕರ ಬೇಡಿಕೆಯಲ್ಲಿ ತ್ವರಿತ ಚೇತರಿಕೆಯ ಭರವಸೆಯನ್ನು ಇದು ಹೆಚ್ಚಿಸಿದೆ. ಕೊರೋನಾವೈರಸ್-ಸಂಬಂಧಿತ ಅಡೆತಡೆಗಳ ನಂತರ ಆರ್ಥಿಕತೆಯಲ್ಲಿ ಬೇಡಿಕೆ ಕ್ರಮೇಣ ಸಹಜ ಸ್ಥಿತಿಗೆ ಬಂದ ಕಾರಣ ದೇಶದ ಆರ್ಥಿಕತೆಯು ತ್ರೈಮಾಸಿಕದಲ್ಲಿ ವೇಗವನ್ನು ಪಡೆದುಕೊಂಡಿದೆ.
ಕಳೆದ ವರ್ಷ ಇದೇ ಅವಧಿಯಲ್ಲಿ ಆರ್ಥಿಕತೆಯು ಶೇ.7.5ರಷ್ಟು ಕುಸಿದಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


