
ನವದೆಹಲಿ: ಕಳೆದ ಮೂರು ವರ್ಷಗಳಲ್ಲಿ ಸುಮಾರು 2 ಕೋಟಿ ಫಲಾನುಭವಿಗಳು ಅಟಲ್ ಪಿಂಚಣಿ ಯೋಜನೆ ಅಡಿಯಲ್ಲಿ ನೋಂದಾಯಿಸಿಕೊಂಡಿದ್ದಾರೆ ಎಂದು ಕೇಂದ್ರ ಸರಕಾರ ತಿಳಿಸಿದೆ.
ಕಳೆದ ಮೂರು ವರ್ಷಗಳಲ್ಲಿ 88 ಲಕ್ಷ ಮಹಿಳೆಯರು ಮತ್ತು 4,500 ತೃತೀಯ ಲಿಂಗಿಗಳು ಸೇರಿದಂತೆ ಸುಮಾರು ಎರಡು ಕೋಟಿ ಫಲಾನುಭವಿಗಳು ಅಟಲ್ ಪಿಂಚಣಿ ಯೋಜನೆ ಅಡಿಯಲ್ಲಿ ನೋಂದಾಯಿಸಿಕೊಂಡಿದ್ದಾರೆ ಎಂದಿದೆ.
ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಹಣಕಾಸು ಖಾತೆ ರಾಜ್ಯ ಸಚಿವ ಡಾ. ಭಾಗವತ್ ಕರಾಡ್ ಅವರು, ಬ್ಯಾಂಕ್ ಅಥವಾ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಹೊಂದಿರುವ 18 ರಿಂದ 40 ವರ್ಷದೊಳಗಿನ ಎಲ್ಲಾ ನಾಗರಿಕರಿಗಾಗಿ ಈ ಯೋಜನೆ ಇದೆ. ಅಟಲ್ ಪಿಂಚಣಿ ಯೋಜನೆಯು 1 ಜೂನ್ 2015 ರಿಂದ ಕಾರ್ಯನಿರ್ವಹಿಸುತ್ತಿದೆ, ಎಲ್ಲಾ ಭಾರತೀಯರಿಗೆ, ವಿಶೇಷವಾಗಿ ಬಡವರು, ಹಿಂದುಳಿದವರು ಮತ್ತು ಅಸಂಘಟಿತ ವಲಯಗಳಲ್ಲಿನ ಕಾರ್ಮಿಕರಿಗೆ ಸಾರ್ವತ್ರಿಕ ಸಾಮಾಜಿಕ ಭದ್ರತಾ ವ್ಯವಸ್ಥೆಯನ್ನು ರಚಿಸುವ ಉದ್ದೇಶದಿಂದ ಇದನ್ನು ಜಾರಿಗೆ ತರಲಾಗಿದೆ ಎಂದಿದ್ದಾರೆ.
ಅಟಲ್ ಪಿಂಚಣಿ ಯೋಜನೆಯನ್ನು ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (ಎನ್ಪಿಎಸ್) ಅಡಿಯಲ್ಲಿ ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ ಅಥವಾ ಪಿಎಫ್ಆರ್ಡಿಎ ನಿರ್ವಹಿಸುತ್ತದೆ. ಅಟಲ್ ಪಿಂಚಣಿ ಯೋಜನೆಯಡಿ, ಚಂದಾದಾರರು 60 ವರ್ಷ ದಾಟಿದ ನಂತರ ನಿಗದಿತ ಪಿಂಚಣಿ ಮೊತ್ತವನ್ನು ಪಡೆಯುತ್ತಾರೆ. ವೃದ್ಧಾಪ್ಯದಲ್ಲಿ ಅವರಿಗೆ ಸಹಾಯಕವಾಗುವಂತಹ ಪಿಂಚಣಿ ಯೋಜನೆಯನ್ನು ಆಯ್ಕೆ ಮಾಡಲು ಇದು ಜನರನ್ನು ಪ್ರೋತ್ಸಾಹಿಸುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


