
ನವದೆಹಲಿ: ಕಳೆದ ಐದು ವರ್ಷಗಳಲ್ಲಿ 4177 ಜನರಿಗೆ ಭಾರತೀಯ ಪೌರತ್ವ ನೀಡಲಾಗಿದೆ ಎಂದು ಲೋಕಸಭೆಗೆ ಮಂಗಳವಾರ ಕೇಂದ್ರ ಸರ್ಕಾರ ಮಾಹಿತಿ ನೀಡಲಾಗಿದೆ.
ಕಳೆದ ಐದು ವರ್ಷಗಳಲ್ಲಿ 10645 ಮಂದಿ ಭಾರತೀಯ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಅವರು ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
227 ಅಮೆರಿಕಾದಿಂದ, 7782 ಪಾಕಿಸ್ಥಾನದಿಂದ, 795 ಅಫ್ಘಾನಿಸ್ಥಾನದಿಂದ ಮತ್ತು 184 ಬಾಂಗ್ಲಾದೇಶದಿಂದ ಬಂದ ಜನರಿಗೆ ಪೌರತ್ವ ನೀಡಲಾಗಿದೆ. 2016ರಲ್ಲಿ 1106 ಮಂದಿಗೆ ಭಾರತೀಯ ಪೌರತ್ವ ನೀಡಲಾಗಿದ್ದು, 2017ರಲ್ಲಿ 817 ಮಂದಿ, 2018ರಲ್ಲಿ 628 ಮಂದಿ, 2019ರಲ್ಲಿ 987 ಮಂದಿ ಹಾಗೂ 2020ರಲ್ಲಿ 639 ಮಂದಿಗೆ ಭಾರತೀಯ ಪೌರತ್ವ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
2017 ರಿಂದ ಸೆಪ್ಟೆಂಬರ್ 30, 2021 ರವರೆಗೆ ಸುಮಾರು ಆರು ಲಕ್ಷ ಭಾರತೀಯರು ದೇಶದ ಪೌರತ್ವವನ್ನು ತ್ಯಜಿಸಿ ವಿದೇಶಗಳ ಪೌರತ್ವವನ್ನು ಸ್ವೀಕರಿಸಿದ್ದಾರೆ ಎಂದು ಅವರು ಹೇಳಿದರು. ಭಾರತದ ಸುಮಾರು 1,33,83,718 ನಾಗರಿಕರು ಭಾರತದ ಹೊರಗೆ ಇತರ ದೇಶಗಳಲ್ಲಿ ವಾಸಿಸುತ್ತಿದ್ದಾರೆ.
ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ರಾಯ್ ಅವರು ಸಿಎಎಯನ್ನು ಡಿಸೆಂಬರ್ 12, 2019 ರಂದು ಅಧಿಸೂಚಿಸಲಾಗಿದೆ ಮತ್ತು ಜನವರಿ 10, 2020 ರಂದು ಜಾರಿಗೆ ಬಂದಿದೆ ಎಂದು ಹೇಳಿದರು. ಪೌರತ್ವ ತಿದ್ದುಪಡಿ ಕಾಯ್ದೆಯ ಅಡಿಯಲ್ಲಿ ಬರುವ ವ್ಯಕ್ತಿಗಳು ನಿಯಮಗಳನ್ನು ನೋಟಿಫೈ ಮಾಡಿದ ನಂತರ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಬಹುದು.
ರಾಷ್ಟ್ರವ್ಯಾಪಿ ಎನ್ಆರ್ಸಿ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸರ್ಕಾರ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


