
ನವದೆಹಲಿ: ಜವಾದ್ ಚಂಡಮಾರುತದಿಂಂದ ಉಂಟಾಗುವ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಲು ರಾಜ್ಯಗಳು ಮತ್ತು ಸಂಬಂಧಿತ ಏಜೆನ್ಸಿಗಳ ಸನ್ನದ್ಧತೆಯನ್ನು ಪರಿಶೀಲಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಿನ್ನೆ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಎಲ್ಲಾ ಅಗತ್ಯ ಸೇವೆಗಳ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪ್ರಧಾನ ಮಂತ್ರಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಯಾವುದೇ ವ್ಯತ್ಯಯ ಉಂಟಾದ ಸಂದರ್ಭದಲ್ಲಿ ಅಗತ್ಯ ಸೇವೆಗಳನ್ನು ತಕ್ಷಣ ಮರುಸ್ಥಾಪಿಸಲು ಕ್ರಮಕೈಗೊಳ್ಳುವಂತೆ ಅವರು ಸೂಚನೆ ನೀಡಿದರು. ಅಗತ್ಯ ಔಷಧಗಳು ಮತ್ತು ಸರಬರಾಜುಗಳ ಸಮರ್ಪಕ ಸಂಗ್ರಹಣೆಯನ್ನು ಖಚಿತಪಡಿಸಿಕೊಳ್ಳಲು ಅವರು ನಿರ್ದೇಶನ ನೀಡಿದರು.
ಕಂಟ್ರೋಲ್ ರೂಂಗಳ 24 X 7 ಕಾರ್ಯನಿರ್ವಹಣೆಯನ್ನು ಖಚಿತಪಡಿಸುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸಭೆಯಲ್ಲಿ ಪ್ರಧಾನ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ, ಸಂಪುಟ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆಯ ಮಹಾನಿರ್ದೇಶಕರು ಮತ್ತು ಭಾರತೀಯ ಹವಾಮಾನ ಇಲಾಖೆಯ ಮಹಾನಿರ್ದೇಶಕರು ಉಪಸ್ಥಿತರಿದ್ದರು.
ಬಂಗಾಳಕೊಲ್ಲಿಯಲ್ಲಿನ ಕಡಿಮೆ ಒತ್ತಡದ ಪ್ರದೇಶವು ಜವಾದ್ ಚಂಡಮಾರುತವಾಗಿ ತೀವ್ರಗೊಳ್ಳುವ ನಿರೀಕ್ಷೆಯಿದೆ ಮತ್ತು ಬರುವ ಶನಿವಾರ ಮುಂಜಾನೆ ಉತ್ತರ ಆಂಧ್ರಪ್ರದೇಶ ಮತ್ತು ಒಡಿಶಾದ ಕರಾವಳಿಯನ್ನು ತಲುಪುವ ನಿರೀಕ್ಷೆಯಿದೆ ಎಂದು IMD ಮಾಹಿತಿ ನೀಡಿದೆ. ಆಂಧ್ರಪ್ರದೇಶ, ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. IMD ಎಲ್ಲಾ ಸಂಬಂಧಿತ ರಾಜ್ಯಗಳಿಗೆ ಮುನ್ಸೂಚನೆಯೊಂದಿಗೆ ನಿಯಮಿತ ಬುಲೆಟಿನ್ಗಳನ್ನು ನೀಡುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


