
ನವದೆಹಲಿ: ಬಂದರುಗಳು, ಶಿಪ್ಪಿಂಗ್ ಮತ್ತು ಜಲಮಾರ್ಗಗಳ ಸಚಿವ ಸರ್ಬಾನಂದ ಸೋನಾವಾಲ್ ಅವರು ನಿನ್ನೆ ನವದೆಹಲಿಯಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಾವಿಕರಿಗಾಗಿ ರಿಮೋಟ್ ಕಾಂಪಿಟೆನ್ಸ್ ಪರೀಕ್ಷೆಯನ್ನು ಉದ್ಘಾಟಿಸಿದರು.
ಭಾರತೀಯ ನಾವಿಕರ ಗುಣಮಟ್ಟವನ್ನು ಸುಧಾರಿಸಲು ಮತ್ತು ಅವರ ಜೀವನವನ್ನು ಆರಾಮದಾಯಕವಾಗಿಸಲು ಸರ್ಕಾರವು ಶ್ರಮಿಸುತ್ತಿದೆ ಎಂದು ಸೋನೊವಾಲ್ ಈ ಸಂದರ್ಭದಲ್ಲಿ ಹೇಳಿದ್ದಾರೆ.
ನೌಕಾಯಾನ, ಬಂದರು ನಾವಿಕರ ತರಬೇತಿ ಮತ್ತು ಅಂತಿಮವಾಗಿ ಸಮುದ್ರ ವಲಯದಲ್ಲಿ ವಿಶ್ವ ನಾಯಕರಾಗಿ ಹೊರಹೊಮ್ಮುವ ಬೆಳವಣಿಗೆಗಾಗಿ ಕೆಲಸ ಮಾಡುವುದಾಗಿ ಅವರು ಭರವಸೆ ನೀಡಿದರು.
ಮರಿಟೈಮ್ ಇಂಡಿಯಾ ವಿಷನ್-2030 ಮೂಲಕ ಸಾಕಾರಗೊಂಡಿರುವ ಪ್ರಧಾನಿಯವರ ದೂರದೃಷ್ಟಿಯನ್ನು ಸಚಿವರು ಸ್ಮರಿಸಿದರು. ಭಾರತವು ಅತಿದೊಡ್ಡ ಸಮುದ್ರಯಾನವನ್ನು ಪೂರೈಸುವ ರಾಷ್ಟ್ರಗಳಲ್ಲಿ ಒಂದಾಗಿದೆ ಮತ್ತು ನಮ್ಮ ನಾವಿಕರು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ಬೇಡಿಕೆಯನ್ನು ಹೊಂದಿದ್ದಾರೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


