ವಾಷಿಂಗ್ಟನ್: ಅಂತಾರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ಮುಖ್ಯ ಅರ್ಥಶಾಸ್ತ್ರಜ್ಞೆಯಾಗಿರುವ ಮೈಸೂರು ಮೂಲದ ಗೀತಾ ಗೋಪಿನಾಥ್ ಅವರು ಐಎಂಎಫ್ನ ಪ್ರಥಮ ಉಪ ವ್ಯವಸ್ಥಾಪಕ ನಿರ್ದೇಶಕಿಯಾಗಿ ಬಡ್ತಿ ಪಡೆದುಕೊಂಡಿದ್ದಾರೆ.
ಜೆಫ್ರಿ ಒಕಾಮೊಟೊ ಅವರು ತೊರೆಯಲಿರುವ ಪ್ರಥಮ ಉಪ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ಗೀತಾ ಗೋಪಿನಾಥನ್ ಅವರ ನೇಮಕವಾಗಿದೆ. ಈಗಾಗಲೇ ಮೂರು ವರ್ಷ ಐಎಂಎಫ್ನ ಮುಖ್ಯ ಅರ್ಥಶಾಸ್ತ್ರಜ್ಞರಾಗಿ ಸೇವೆ ಸಲ್ಲಿಸಿರುವ ಗೀತಾ ಗೋಪಿನಾಥನ್ ಮುಂದಿನ ವರ್ಷದ ಆರಂಭದಲ್ಲಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಂತಾರಾಷ್ಟ್ರೀಯ ಹಣಕಾಸು ನಿಧಿಯ ಇತಿಹಾಸದಲ್ಲಿ ಮೊದಲ ಮಹಿಳಾ ಮುಖ್ಯ ಅರ್ಥಶಾಸ್ತ್ರಜ್ಞರಾಗಿರುವ ಗೀತಾ ಗೋಪಿನಾಥ್ ಅವರು ಐಎಂಎಫ್ನ ಸದಸ್ಯ ರಾಷ್ಟ್ರಗಳಿಂದ ಮೆಚ್ಚುಗೆಯನ್ನು ಗಳಿಸಿದ್ದಾರೆ ಮತ್ತು ಕಠಿಣವಾದ ಕೆಲಸವನ್ನು ಮುನ್ನಡೆಸಿ, ಯಶಸ್ವಿಗೊಳಿಸುವ ಸಾಮರ್ಥ್ಯ ಅವರಲ್ಲಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿಯ ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟಲಿನಾ ಜಾರ್ಜಿವಾ ಅವರು ಹೇಳಿದ್ದಾರೆ.
ಈ ಪ್ರತಿಕ್ರಿಯೆ ನೀಡಿರುವ ಗೀತಾ ಗೋಪಿನಾಥ್, ‘ನನಗೆ ಹೊಸ ಅವಕಾಶ ನೀಡಿದ್ದಕ್ಕಾಗಿ ಕ್ರಿಸ್ಟಲಿನಾ ಜಾರ್ಜಿವಾ ಮತ್ತು ಮಂಡಳಿಗೆ ಕೃತಜ್ಞಳಾಗಿರುತ್ತೇನೆ. ಅಂತಾರಾಷ್ಟ್ರೀಯ ಹಣಕಾಸು ನಿಧಿಯಲ್ಲಿ ಅತ್ಯಂತ ಪ್ರತಿಭಾವಂತ ಸಹೋದ್ಯೋಗಿಗಳಿದ್ದಾರೆ. ಅವರೊಂದಿಗೆ ಕೆಲಸ ಮಾಡುವುದು ನನಗೆ ಸಿಕ್ಕ ಒಳ್ಳೆಯ ಅವಕಾಶ’ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.