ನವದೆಹಲಿ: ಸಹೋದರತೆಯ ಸಂಕೇತವಾದ ರಕ್ಷಾ ಬಂಧನ ಹಬ್ಬವನ್ನು ಇಂದು ದೇಶದಾದ್ಯಂತ ಆಚರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಭ ಹಾರೈಸಿದ್ದಾರೆ.
ಟ್ವೀಟ್ ಮಾಡಿರುವ ಪ್ರಣವ್ ಅವರು, ‘ರಕ್ಷಾಬಂಧನ ದಾರ ಸಹೋದರ, ಸಹೋದರಿಯರನ್ನು ಪ್ರೀತಿ ಮತ್ತು ಬಾಂಧವ್ಯದ ಬೇರ್ಪಡಿಸಲಾಗದ ಬೆಸುಗೆಯಲ್ಲಿ ಬಂಧಿಸುತ್ತದೆ. ನಾವೆಲ್ಲರೂ ದೇಶದ ದೇಶದ ಮಹಿಳೆಯರ ಅದರಲ್ಲೂ ಮುಖ್ಯವಾಗಿ ಹೆಣ್ಣುಮಕ್ಕಳ ಒಳಿತಿಗಾಗಿ ಪಣತೊಡಬೇಕು’ ಎಂದರು.
ಪ್ರಧಾನಿ ಮೋದಿಯವರೂ ದೇಶದ ಜನತೆಗೆ ರಕ್ಷಾಬಂಧನದ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಸಚಿವ ವೆಂಕಯ್ಯ ನಾಯ್ಡು ಅವರಿಗೆ ರಕ್ಷೆಯನ್ನು ಕಟ್ಟಿ, ಶುಭ ಹಾರೈಸಿದರು. ಗೃಹಸಚಿವ ರಾಜನಾಥ್ ಸಿಂಗ್ ಅವರು ಮಕ್ಕಳೊಂದಿಗೆ ರಕ್ಷಾ ಬಂಧನ ಆಚರಿಸಿದರು. ಪ್ರಧಾನಿಗೂ ಮಕ್ಕಳು ಸೇರಿದಂತೆ ಹಲವಾರು ಮಂದಿ ರಾಖಿಯನ್ನು ಕಟ್ಟಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.