
ನವದೆಹಲಿ: ಇಂದು ನೌಕಾಪಡೆ ದಿನ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ, ಉಪರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿಗಳು ನೌಕಾ ದಿನದಂದು ಎಲ್ಲಾ ನೌಕಾಪಡೆಯ ಸಿಬ್ಬಂದಿ, ಯೋಧರು ಮತ್ತು ಅವರ ಕುಟುಂಬಗಳಿಗೆ ಶುಭಾಶಯ ಕೋರಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಟ್ವೀಟ್ ಮಾಡಿ, ಕಡಲ ಭದ್ರತೆಯನ್ನು ಕಾಪಾಡುವುದು ಮತ್ತು ಸಮುದ್ರದಲ್ಲಿ ನಮ್ಮ ಹಿತಾಸಕ್ತಿಗಳನ್ನು ರಕ್ಷಿಸುವುದರ ಜೊತೆಗೆ, ನಮ್ಮ ನೌಕಾಪಡೆಯು ಕೋವಿಡ್-19 ಸಂಬಂಧಿತ ಬಿಕ್ಕಟ್ಟುಗಳನ್ನು ನಿಭಾಯಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತಿದೆ ಎಂದಿದ್ದಾರೆ.
ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಟ್ವೀಟ್ ಮಾಡಿ, ಭಾರತದ ರಾಷ್ಟ್ರೀಯ ಹಿತಾಸಕ್ತಿ, ಕಡಲ ಭದ್ರತೆ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಕಾಪಾಡುವಲ್ಲಿ ಭಾರತೀಯ ನೌಕಾಪಡೆಯ ಪಾತ್ರದ ಬಗ್ಗೆ ರಾಷ್ಟ್ರವು ಹೆಮ್ಮೆಪಡುತ್ತದೆ ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ, ಭಾರತೀಯ ನೌಕಾಪಡೆಯ ಅನುಕರಣೀಯ ಕೊಡುಗೆಗಳ ಬಗ್ಗೆ ಭಾರತವು ಹೆಮ್ಮೆಪಡುತ್ತದೆ. ನಮ್ಮ ನೌಕಾಪಡೆಯು ಅದರ ವೃತ್ತಿಪರತೆ ಮತ್ತು ಅತ್ಯುತ್ತಮ ಧೈರ್ಯಕ್ಕಾಗಿ ವ್ಯಾಪಕವಾಗಿ ಗೌರವಿಸಲ್ಪಟ್ಟಿದೆ. ನೈಸರ್ಗಿಕ ವಿಕೋಪಗಳಂತಹ ಬಿಕ್ಕಟ್ಟಿನ ಸಂದರ್ಭಗಳಲ್ಲಿ ನಮ್ಮ ನೌಕಾಪಡೆಯ ಸಿಬ್ಬಂದಿ ಯಾವಾಗಲೂ ಮುಂಚೂಣಿಯಲ್ಲಿರುತ್ತಾರೆ ಎಂದಿದ್ದಾರೆ.
On Navy Day, greetings to all Navy personnel, veterans and their families. Besides safeguarding maritime security and protecting our interests in the sea, our Navy also played a stellar role in coping with the COVID-19 related crises. Indians remain grateful for your service.
— President of India (@rashtrapatibhvn) December 4, 2021
Greetings on Navy Day. We are proud of the exemplary contributions of the Indian navy. Our navy is widely respected for its professionalism and outstanding courage. Our navy personnel have always been at the forefront of mitigating crisis situations like natural disasters. pic.twitter.com/Cc4XgbMYuz
— Narendra Modi (@narendramodi) December 4, 2021
Greetings on Navy Day. We are proud of the exemplary contributions of the Indian navy. Our navy is widely respected for its professionalism and outstanding courage. Our navy personnel have always been at the forefront of mitigating crisis situations like natural disasters. pic.twitter.com/Cc4XgbMYuz
— Narendra Modi (@narendramodi) December 4, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


