
ಶ್ರೀನಗರ: ಜಮ್ಮು- ಸೇವ್ ಶಾರದ ಕಮಿಟಿ (ಎಸ್ಎಸ್ಸಿ) ಶುಕ್ರವಾರ ಜಮ್ಮು ಮತ್ತು ಕಾಶ್ಮೀರದ ಎಲ್ಒಸಿ ಬಳಿಯ ಟೀತ್ವಾಲ್ನ ಮಾತಾ ಶಾರದಾ ದೇವಿ ಮಂದಿರದ ಪುನರ್ ನಿರ್ಮಾಣಕ್ಕಾಗಿ ಅಡಿಪಾಯವನ್ನು ಹಾಕಿದೆ.
ಪಾಕಿಸ್ಥಾನ ಆಕ್ರಮಿತ ಕಾಶ್ಮೀರ (PoK) ದಲ್ಲಿರುವ ಶತಮಾನಗಳಷ್ಟು ಹಳೆಯ ಶಾರದಾಪೀಠ ದೇವಾಲಯಕ್ಕೆ ತೀರ್ಥಯಾತ್ರೆಯನ್ನು ಪುನರುಜ್ಜೀವನಗೊಳಿಸುವ ದೃಷ್ಟಿಯಿಂದ ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿರುವ ಪುರಾತನ ದೇವಾಲಯ ಮತ್ತು ಅದರ ಕೇಂದ್ರವನ್ನು ಪುನರ್ ನಿರ್ಮಿಸಲಾಗುವುದು ಎಂದು ಸಮಿತಿ ತಿಳಿಸಿದೆ.
ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವಾಲಯದ ವಕ್ಫ್ ಅಭಿವೃದ್ಧಿ ಸಮಿತಿ ಅಧ್ಯಕ್ಷ ಹಾಗೂ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ದಾರಾಕ್ಷನ್ ಅಂದ್ರಾಬಿ ಮಂದಿರದ ಶಂಕುಸ್ಥಾಪನೆ ನೆರವೇರಿಸಿದರು.
ಪಿಒಕೆಯಲ್ಲಿರುವ ಶಾರದ ಪೀಠವು ಭಾರತೀಯ ಉಪಖಂಡದ ಅಗ್ರಗಣ್ಯ ಪ್ರಾಚೀನ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿದೆ.
ಶಾರದಾ ಪೀಠವು ನೀಲಂ ನದಿಯ ಉದ್ದಕ್ಕೂ ಇರುವ ಶಾರದಾ ಗ್ರಾಮದಲ್ಲಿ ನೆಲೆಗೊಂಡಿರುವ ಒಂದು ಪಾಳು ಬಿದ್ದ ದೇವಾಲಯವಾಗಿದೆ, ಇದು ಕಲಿಕೆಯ ಪ್ರಮುಖ ಕೇಂದ್ರವಾಗಿತ್ತು. ಇದು ದಕ್ಷಿಣ ಏಷ್ಯಾದ 18 ಅತ್ಯಂತ ಪೂಜ್ಯ ದೇವಾಲಯಗಳಲ್ಲಿ ಒಂದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


