
ನವದೆಹಲಿ: ಸಾಮಾನ್ಯ ಜನರು ಮತ್ತು ದಾವೆದಾರರಿಗೆ ವಿಶೇಷವಾಗಿ ಗ್ರಾಮೀಣ ಪ್ರದೇಶದ ಜನರಿಗೆ ಸಹಾಯ ಮಾಡಲು ಕೇಂದ್ರ ಸರಕಾರವು ‘ನ್ಯಾಯ ಮನೆ ಬಾಗಿಲಿಗೆ ” ಉಪಕ್ರಮಕ್ಕೆ ಉತ್ತೇಜನ ನೀಡುತ್ತಿದೆ.
ಶುಕ್ರವಾರ ಲೋಕಸಭೆಯಲ್ಲಿ ಈ ವಿಷಯ ತಿಳಿಸಿದ ಕೇಂದ್ರ ಕಾನೂನು ಸಚಿವ ಕಿರಣ್ ರಿಜ್ಜು, ‘ನ್ಯಾಯ ಮನೆ ಬಾಗಿಲಿಗೆ’ ಎಂಬ ಪರಿಕಲ್ಪನೆಯೊಂದಿಗೆ ಸಂಚಾರಿ ನ್ಯಾಯಾಲಯಗಳು, ಲೋಕ ಅದಾಲತ್ಗಳ ಸ್ಥಾಪನೆ ಹಾಗೂ ಸ್ಥಳದಲ್ಲೇ ಪ್ರಕರಣಗಳ ವಿಚಾರಣೆ ನಡೆಸುವ ಮೂಲಕ ಮಹತ್ವದ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ ಎಂದಿದ್ದಾರೆ.
“ಗ್ರಾಮೀಣ ಪ್ರದೇಶಗಳಲ್ಲಿ, ವಿಶೇಷವಾಗಿ ಮೂಲಭೂತ ಕನಿಷ್ಠ ನ್ಯಾಯವನ್ನು ಪಡೆಯಲು ಜನರು ನಿಜವಾಗಿಯೂ ಹೋರಾಟ ಮಾಡಬೇಕಾಗಿಲ್ಲದ ರೀತಿಯಲ್ಲಿ ವಿಚಾರಣೆ ನಡೆಸುವುದನ್ನು ಖಚಿತಪಡಿಸಿಕೊಳ್ಳುತ್ತಿದ್ದೇವೆ” ಎಂದಿದ್ದಾರೆ.
ಎರಡು ವರ್ಷಗಳ ಹಿಂದೆ ನ್ಯಾಯಾಂಗ ಸಮ್ಮೇಳನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಡವರಿಗೆ ನ್ಯಾಯದ ಸಾಂವಿಧಾನಿಕ ಹಕ್ಕಿನ ವಿಷಯಕ್ಕೆ ಚಾಲನೆ ನೀಡಿದ ಸಂದರ್ಭದಲ್ಲಿ ‘ಜಸ್ಟೀಸ್ ಅಟ್ ದಿ ಡೋರ್ ಸ್ಟೆಪ್ʼ ಎಂಬ ಕಲ್ಪನೆಯನ್ನು ರೂಪಿಸಲಾಯಿತು. ಇದು ಮುಖ್ಯವಾಗಿ ಸಂಪರ್ಕ ಮತ್ತು ತ್ವರಿತ ನ್ಯಾಯ ವಿತರಣಾ ವ್ಯವಸ್ಥೆಯ ಮೇಲೆ ಕೇಂದ್ರೀಕರಿಸುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


