
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಎಸ್.ಶಿವರಾಂ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.
ಕೆಲ ದಿನಗಳ ಹಿಂದಷ್ಟೇ ಅವರು ಬಿದ್ದು ತಲೆ ಏಟಾಗಿತ್ತು, ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಅವರು ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ.
ನಾಳೆ ಹಿರಿಯ ನಟನ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಕಿರುತೆರೆ ಹಾಗೂ ಹಿರಿತೆರೆಯ ಹಲವಾರು ಸಿನಿಮಾ ಹಾಗೂ ಧಾರವಾಹಿಗಳಲ್ಲಿ ಶಿವರಾಂ ಅವರು ನಟಿಸಿದ್ದಾರೆ. 1938ರಲ್ಲಿ ಚೂಡಸಂದ್ರ ಹಳ್ಳಿಯಲ್ಲಿ ಜನಿಸಿದ್ದ ಎಸ್. ಶಿವರಾಂ, 6 ದಶಕಗಳ ಕಾಲ ನೂರಾರು ಚಿತ್ರಗಳಲ್ಲಿ ಅಭಿನಯಿಸಿದ್ದರು. ಚಿತ್ರರಂಗದಲ್ಲಿ ಅವರು ಶಿವರಾಮಣ್ಣ ಎಂದೇ ಎಲ್ಲರಿಗೂ ಪರಿಚಿತರಾಗಿದ್ದರು. ಪೋಷಕ ನಟನಾಗಿ, ಹಾಸ್ಯನಟನಾಗಿ ನಟಿಸಿದ್ದ ಅವರು, ನಿರ್ದೇಶಕ, ನಿರ್ಮಾಪಕರಾಗಿಯೂ ಚಿತ್ರರಂಗಕ್ಕೆ ಕೊಡುಗೆ ನೀಡಿದ್ದರು.
1958ರಿಂದ 1965ರವರೆಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಶಿವರಾಮ್ ಅವರು, ಶರಪಂಜರ, ನಾಗರಹಾವು, ಶುಭಮಂಗಳ, ಚಲಿಸುವ ಮೋಡಗಳು, ಶ್ರಾವಣ ಬಂತು, ಹಾಲು ಜೇನು, ಹೊಸಬೆಳಕು, ಗುರುಶಿಷ್ಯರು, ಮಕ್ಕಳ ಸೈನ್ಯ, ಆಪ್ತಮಿತ್ರ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟನೆ ಮಾಡಿದ್ದಾರೆ. ಇದರ ಜೊತೆಗೆ ಗಿರೀಶ್ ಕಾಸರವಳ್ಳಿ ನಿರ್ದೇಶನದ ಗೃಹಭಂಗ, ರವಿಕಿರಣ್ ನಿರ್ದೇಶನದ ಬದುಕು ಧಾರಾವಾಹಿಯಲ್ಲಿ ಅಭಿನಯ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


