
ನವದೆಹಲಿ: ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಮೂಲಸೌಕರ್ಯ ಬೆಳೆಸಲು ಕೇಂದ್ರ ಸರ್ಕಾರ ದೊಡ್ಡ ಉತ್ತೇಜನವನ್ನು ನೀಡುತ್ತಿದ್ದು, ದೇಶದ ಸುಮಾರು 70,000 ಪೆಟ್ರೋಲ್ ಪಂಪ್ಗಳಲ್ಲಿ 22,000 ಚಾರ್ಜಿಂಗ್ ಸ್ಟೇಷನ್ಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲಾಗುತ್ತಿದೆ.
ಎಕ್ಸ್ಪ್ರೆಸ್ ಹೆದ್ದಾರಿಗಳು, ಹೆದ್ದಾರಿಗಳು ಮತ್ತು ಜನನಿಬಿಡ ನಗರಗಳಲ್ಲಿ ಎಲೆಕ್ಟ್ರಿಕ್ ವಾಹನಗಳಿಗಾಗಿ ಇಂತಹ ಚಾರ್ಜಿಂಗ್ ಸ್ಟೇಷನ್ಗಳನ್ನು ಸ್ಥಾಪಿಸಲು ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆಗಳ ಸಚಿವ ಮಹೇಂದ್ರ ನಾಥ್ ಪಾಂಡೆ ರಾಜ್ಯಸಭೆಗೆ ತಿಳಿಸಿದ್ದಾರೆ.
ಮೇಲ್ಮನೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಭಾರತದಲ್ಲಿ ವಿದ್ಯುತ್ ವಾಹನಗಳನ್ನು ವೇಗವಾಗಿ ಅಳವಡಿಸಿಕೊಳ್ಳುವಿಕೆ ಮತ್ತು ತಯಾರಿಸುವಿಕೆ (ಫೇಮ್-ಇಂಡಿಯಾ II) ಯೋಜನೆಯಡಿ ಸರ್ಕಾರವು ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ (ಎಆರ್ಎಐ) ಗೆ ನಿರ್ದೇಶನ ನೀಡಿದೆ ಎಂದು ಹೇಳಿದರು. ಪುಣೆಯಲ್ಲಿ, ಆಟೋಮೊಬೈಲ್ ಕ್ಷೇತ್ರದಲ್ಲಿ ಕೆಲಸ ಮಾಡುವ ಸಂಸ್ಥೆ, ಎಲೆಕ್ಟ್ರಿಕ್ ವಾಹನಗಳನ್ನು ವೇಗವಾಗಿ ಚಾರ್ಜ್ ಮಾಡಲು ಮೂಲಮಾದರಿಯನ್ನು ಅಭಿವೃದ್ಧಿಪಡಿಸಲಿದೆ ಎಂದಿದ್ದಾರೆ.
ಮುಂದಿನ ವರ್ಷದ ಡಿಸೆಂಬರ್ ವೇಳೆಗೆ ಮಾರುಕಟ್ಟೆಯಲ್ಲಿ ವೇಗದ ಚಾರ್ಜಿಂಗ್ ವ್ಯವಸ್ಥೆಯನ್ನು ಹೊಂದುವ ಗುರಿ ಹೊಂದಲಾಗಿದೆ ಎಂದು ಪಾಂಡೆ ಹೇಳಿದರು.
“ನಮ್ಮ ಸಚಿವಾಲಯವು ಪೆಟ್ರೋಲಿಯಂ ಮತ್ತು ವಿದ್ಯುತ್ ಸಚಿವಾಲಯಗಳೊಂದಿಗೆ ಜಂಟಿಯಾಗಿ ಫೇಮ್ ಇಂಡಿಯಾ ಅನುಷ್ಠಾನಕ್ಕೆ ಕೆಲಸ ಮಾಡುತ್ತಿದೆ. ದೇಶಾದ್ಯಂತ ಸುಮಾರು 70,000 ಪೆಟ್ರೋಲ್ ಪಂಪ್ಗಳಲ್ಲಿ 22,000 ಚಾರ್ಜಿಂಗ್ ಸ್ಟೇಷನ್ಗಳನ್ನು ಸ್ಥಾಪಿಸಲು ನಾವು ಕೆಲಸ ಮಾಡುತ್ತಿದ್ದೇವೆ ಮತ್ತು ಈ ನಿಟ್ಟಿನಲ್ಲಿ ಕೆಲಸ ಕ್ಷಿಪ್ರಗತಿಯಲ್ಲಿ ನಡೆಸಲಾಗುತ್ತಿದೆ” ಎಂದು ಸಚಿವರು ರಾಜ್ಯಸಭೆಗೆ ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


