ನವದೆಹಲಿ: ಹಿಮಾಚಲ ಪ್ರದೇಶ ಸರ್ಕಾರವು ತನ್ನ ಅರ್ಹ ಜನಸಂಖ್ಯೆಗೆ 100% ಎರಡನೇ ಡೋಸ್ ಲಸಿಕೆಯನ್ನು ನೀಡಿದೆ. ಈ ಹಿನ್ನಲೆಯಲ್ಲಿ ಕೋವಿಡ್ ವ್ಯಾಕ್ಸಿನೇಷನ್ ಸಾಧನೆಯನ್ನು ಗುರುತಿಸಲು ಇಂದು ಏಮ್ಸ್ ಬಿಲಾಸ್ಪುರದಲ್ಲಿ ಮೆಗಾ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ.
ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಮತ್ತು ಸ್ಥಳೀಯ ಸಂಸದ ಅನುರಾಗ್ ಸಿಂಗ್ ಠಾಕೂರ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಮತ್ತು ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಕೇಂದ್ರ ಆರೋಗ್ಯ ಸಚಿವರು ಹಿಮಾಚಲ ಪ್ರದೇಶದಲ್ಲಿ ಸಂಪೂರ್ಣ ಲಸಿಕಾ ಅಭಿಯಾನವನ್ನು ಪೂರ್ಣಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸಿದ ರಾಜ್ಯದ ಆರೋಗ್ಯ ಕಾರ್ಯಕರ್ತರನ್ನು ಸನ್ಮಾನಿಸಲಿದ್ದಾರೆ. ಇದಕ್ಕಾಗಿ ರಾಜ್ಯದ ಎಲ್ಲ ಜಿಲ್ಲೆಗಳಿಂದ ಆಯ್ದ ಕೆಲ ಆರೋಗ್ಯ ಕಾರ್ಯಕರ್ತರನ್ನು ಆಹ್ವಾನಿಸಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರು ಇಂದು ಬಿಲಾಸ್ಪುರದ ಏಮ್ಸ್ನಲ್ಲಿ ಒಪಿಡಿಯನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಿಸಲು ರಾಜ್ಯದ ಪ್ರಮುಖ ಸ್ಥಳಗಳಲ್ಲಿ ಎಲ್ಇಡಿ ಪರದೆಗಳನ್ನು ಅಳವಡಿಸಲಾಗಿದೆ. ಕೇಂದ್ರ ಆರೋಗ್ಯ ಸಚಿವರು ಬಿಲಾಸ್ಪುರದ ಏಮ್ಸ್ನ ಪ್ರಗತಿಯನ್ನು ಪರಿಶೀಲಿಸಲಿದ್ದಾರೆ. ಈ ಸಭೆಯಲ್ಲಿ ಕೇಂದ್ರ ಸಚಿವರು, ರಾಜ್ಯ ಸಚಿವರು ಮತ್ತು ಏಮ್ಸ್ ಆಡಳಿತ ಮಂಡಳಿ ಉಪಸ್ಥಿತರಿರುವರು.
ಕೋವಿಡ್ ಲಸಿಕಾ ಡೋಸ್ನ ಶೇಕಡಾ 100 ರಷ್ಟು ಗುರಿಯನ್ನು ಪೂರೈಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಹಿಮಾಚಲ ಪಾತ್ರವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.