ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ 21 ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಗಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಇಂದು ಅಧಿಕೃತ ಭೇಟಿಗಾಗಿ ನವದೆಹಲಿಗೆ ಆಗಮಿಸಲಿದ್ದಾರೆ.
ಈ ಸಂದರ್ಭದಲ್ಲಿ ಮೋದಿ ಮತ್ತು ಪುಟಿನ್ ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಮತ್ತು ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
21 ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ವಿದೇಶಾಂಗ ಸಚಿವ ಡಾ.ಎಸ್. ಜೈಶಂಕರ್ ಅವರು ಸಂವಾದದಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ ಮತ್ತು ರಷ್ಯಾವನ್ನು ವಿದೇಶಾಂಗ ಸಚಿವ ಸರ್ಗೆಯ್ ಲಾವ್ರೊವ್ ಮತ್ತು ರಕ್ಷಣಾ ಸಚಿವ ಸೆರ್ಗೆಯ್ ಶೋಯಿಗು ಪ್ರತಿನಿಧಿಸಲಿದ್ದಾರೆ.
ಮಾತ್ರವಲ್ಲದೇ ಪುಟಿನ್ ಭೇಟಿಯ ವೇಳೆ ಭಾರತ ಮತ್ತು ರಷ್ಯಾ ನಡುವೆ ಬಾಹ್ಯಾಕಾಶ, ಮಿಲಿಟರಿ-ತಾಂತ್ರಿಕ ಸಹಕಾರ, ವಿಜ್ಞಾನ ಮತ್ತು ತಂತ್ರಜ್ಞಾನ, ಶಿಕ್ಷಣ ಮತ್ತು ಸಂಸ್ಕೃತಿ ಸೇರಿದಂತೆ 10ಕ್ಕೂ ಹೆಚ್ಚು ದ್ವಿಪಕ್ಷೀಯ ಒಪ್ಪಂದಗಳಿಗೆ ಸಹಿ ಬೀಳುವ ಸಾಧ್ಯತೆಯಿದೆ. ಇದರೊಂದಿಗೆ, ಉಭಯ ದೇಶಗಳು 7.5 ಲಕ್ಷ ಎಕೆ-203 ಅಸಾಲ್ಟ್ ರೈಫಲ್ಗಳನ್ನು ಪೂರೈಸುವ ಒಪ್ಪಂದಕ್ಕೆ ಸಹಿ ಹಾಕಲಿವೆ ಎಂದು ಮೂಲಗಳು ತಿಳಿಸಿವೆ.
ಭಾರತದ ರಕ್ಷಣಾ ಉತ್ಪಾದನೆಯಲ್ಲಿ ಸ್ವಾವಲಂಬನೆಯನ್ನು ಉತ್ತೇಜಿಸುವ ಪ್ರಯತ್ನದಲ್ಲಿ ಉತ್ತರ ಪ್ರದೇಶದ ಅಮೇಥಿಯ ಕೊರ್ವಾದಲ್ಲಿ ಐದು ಲಕ್ಷಕ್ಕೂ ಹೆಚ್ಚು AK-203 ಅಸಾಲ್ಟ್ ರೈಫಲ್ಗಳನ್ನು ರಷ್ಯಾ ಬೆಂಬಲದೊಂದಿಗೆ ಉತ್ಪಾದಿಸುವ ಯೋಜನೆಗೆ ಕೇಂದ್ರ ಅನುಮೋದನೆ ನೀಡಿದೆ. ಕಳೆದ ವರ್ಷ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಸ್ಕೋಗೆ ಭೇಟಿ ನೀಡಿದ ಸಂದರ್ಭದಲ್ಲಿ ರಷ್ಯಾ ಮತ್ತು ಭಾರತ ಎರಡೂ ಒಪ್ಪಂದಕ್ಕೆ ತಾತ್ವಿಕ ಒಪ್ಪಿಗೆ ನೀಡಿದ್ದವು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.