ನವದೆಹಲಿ: ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ ಅವರು ಇಂದು ಹಿಂದೂ ಧರ್ಮವನ್ನು ಸ್ವೀಕಾರ ಮಾಡಿದ್ದಾರೆ. ಗಾಜಿಯಾಬಾದಿನ ದಸ್ನಾ ದೇಗುಲದಲ್ಲಿ ಅವರು ಹಿಂದೂವಾಗಿ ಪರಿವರ್ತನೆಗೊಂದು ತಮ್ಮ ಹೆಸರನ್ನು ಹರ್ಬಿರ್ ನಾರಾಯಣ ಸಿಂಗ್ ತ್ಯಾಗಿ ಎಂದು ಬದಲಾಯಿಸಿಕೊಂಡಿದ್ದಾರೆ.
ಯತಿ ನರಸಿಂಗಾನಂದ್ ಗಿರಿ ಅವರ ನೇತೃತ್ವದಲ್ಲಿ ರಿಜ್ವಿ ಮತಾಂತರಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವಾಸಿಂ ರಿಜ್ವಿ ಇತ್ತೀಚೆಗಷ್ಟೇ ತನ್ನ ಮರಣದ ನಂತರ ನನ್ನನ್ನು ಸಮಾಧಿ ಮಾಡಬಾರದು, ಹಿಂದೂ ಸಂಪ್ರದಾಯದ ಪ್ರಕಾರ ಸುಡಬೇಕು ಎಂಬ ಆಶಯವನ್ನು ವ್ಯಕ್ತಪಡಿಸಿದ್ದರು.
ವಸೀಂ ರಿಜ್ವಿ ವಿಡಿಯೋವನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಮುಸ್ಲಿಂ ಗುಂಪುಗಳು ತನ್ನನ್ನು ಕೊಂದು ತಲೆ ಕಡಿಯಲು ಸಂಚು ರೂಪಿಸುತ್ತಿವೆ ಎಂದು ಆರೋಪಿಸಿದ್ದಾರೆ. ವಿಡಿಯೋ ಸಂದೇಶದಲ್ಲಿ ಅವರು, “ನನ್ನ ಏಕೈಕ ತಪ್ಪು ಅಂದರೆ ನಾನು ಕುರಾನ್ನ 26 ಶ್ಲೋಕಗಳನ್ನು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಿದ್ದೇನೆ. ಮುಸ್ಲಿಮರು ನನ್ನನ್ನು ಕೊಲ್ಲಲು ಬಯಸುತ್ತಿದ್ದಾರೆ” ಎಂದಿದ್ದಾರೆ.
ಕುರಾನ್ನಿಂದ ಕೆಲವು ಸಾಲುಗಳನ್ನು ತೆಗೆದುಹಾಕುವಂತೆ ವಾಸೀಮ್ ರಿಜ್ವಿ ಸುಪ್ರಿಂಕೋರ್ಟ್ಗೆ ಮನವಿ ಮಾಡಿದ್ದರು. ಭಯೋತ್ಪಾದನೆಯನ್ನು ಉತ್ತೇಜಿಸುವ ಕುರಾನ್ನಲ್ಲಿರುವ 26 ಶ್ಲೋಕಗಳನ್ನು ಉಲ್ಲೇಖಿಸಿ ಅವರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜ್ವಿಗೆ 50,000 ರೂ. ದಂಡ ವಿಧಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.