ನವದೆಹಲಿ: ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ಉಳಿತಾಯ ಮಾಡುವಂತೆ ಪೋಷಕರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಸುಕನ್ಯಾ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯಡಿಯಲ್ಲಿ ಏಪ್ರಿಲ್ 1, 2018 ರಿಂದ 1.43 ಕೋಟಿ ಖಾತೆಗಳನ್ನು ತೆರೆಯಲಾಗಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.
ಏಪ್ರಿಲ್ 1, 2018 ರಿಂದ ಎರಡು ವರ್ಷ ಏಳು ತಿಂಗಳ ಅವಧಿಯಲ್ಲಿ ದೇಶದಲ್ಲಿ ಸುಮಾರು 1.43 ಕೋಟಿ ಸುಕನ್ಯಾ ಸಮೃದ್ಧಿ ಖಾತೆಗಳನ್ನು ತೆರೆಯಲಾಗಿದೆ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಹೇಳಿದ್ದಾರೆ.
ಲೋಕಸಭೆಯಲ್ಲಿ ಲಿಖಿತ ಉತ್ತರ ನೀಡಿದೆ ಅವರು, ಉತ್ತರ ಪ್ರದೇಶವು ಖಾತೆ ತೆರೆಯುವಿಕೆಯಲ್ಲಿ ಅಗ್ರಸ್ಥಾನದಲ್ಲಿದೆ ಎಂದು ಹೇಳಿದ್ದಾರೆ. ನಂತರದ ಸ್ಥಾನದಲ್ಲಿ ತಮಿಳುನಾಡು ಮತ್ತು ಮಹಾರಾಷ್ಟ್ರ ಇದೆ. ನಂತರ ಮಧ್ಯಪ್ರದೇಶ ಮತ್ತು ಕರ್ನಾಟಕ ಮುಂದಿನ ಎರಡು ಸ್ಥಾನಗಳನ್ನು ಪಡೆದುಕೊಂಡಿವೆ.
ಹೆಣ್ಣುಮಕ್ಕಳ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಪೋಷಕರನ್ನು ಉತ್ತೇಜಿಸುವ ಉದ್ದೇಶದಿಂದ ಸುಕನ್ಯಾ ಸಮೃದ್ಧಿ ಯೋಜನೆ ಯೋಜನೆಯನ್ನು 2015 ರಲ್ಲಿ ಪ್ರಾರಂಭಿಸಲಾಯಿತು. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ‘ಬೇಟಿ ಬಚಾವೊ, ಬೇಟಿ ಪದಾವೊ’ ಅಭಿಯಾನದಡಿ ಈ ಯೋಜನೆಯನ್ನು ಪ್ರಾರಂಭಿಸಿದರು. ಇದು ಒಂದು ಸಣ್ಣ ಠೇವಣಿ ಯೋಜನೆಯಾಗಿದ್ದು, ಹೆಣ್ಣು ಮಗುವಿನ ಶಿಕ್ಷಣ ಮತ್ತು ವಿವಾಹ ವೆಚ್ಚಗಳನ್ನು ಪೂರೈಸುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.