ನವದೆಹಲಿ: ಕೋವಿಡ್-19 ಲಸಿಕೆಯ ಮೊದಲ ಡೋಸ್ ಅನ್ನು ದೇಶದ ಅರ್ಹ ಜನಸಂಖ್ಯೆಯ 85 ಪ್ರತಿಶತಕ್ಕೂ ಹೆಚ್ಚು ಜನರಿಗೆ ಹಾಕಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಸೋಮವಾರ ತಿಳಿಸಿದ್ದಾರೆ ಮತ್ತು ಇದಕ್ಕಾಗಿ ಅವರು ದೇಶವನ್ನು ಅಭಿನಂದಿಸಿದ್ದಾರೆ.
“ಮತ್ತೊಂದು ದಿನ, ಮತ್ತೊಂದು ಮೈಲಿಗಲ್ಲು. ಕೋವಿಡ್ ಲಸಿಕೆಯ ಮೊದಲ ಡೋಸ್ ಅನ್ನು ಅರ್ಹ ಜನಸಂಖ್ಯೆಯ 85 ಪ್ರತಿಶತದಷ್ಟು ಜನರಿಗೆ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ‘ಸಬ್ಕಾ ಪ್ರಯಾಸ್’ ಮಂತ್ರದೊಂದಿಗೆ, ಕೋವಿಡ್ ವಿರುದ್ಧದ ಹೋರಾಟದಲ್ಲಿ ಭಾರತವು ಬಲವಾಗಿ ಮುನ್ನಡೆಯುತ್ತಿದೆ” ಎಂದು ಮಾಂಡವೀಯಾ ಹೇಳಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಾರ, ಸೋಮವಾರ ಭಾರತದ ಕೋವಿಡ್-19 ಲಸಿಕೆ ವ್ಯಾಪ್ತಿಯು 128.66 ಕೋಟಿ (128,66,56,967) ದಾಟಿದೆ.
ನಿನ್ನೆ ಸಂಜೆ 7 ಗಂಟೆಯವರೆಗೆ 71 ಲಕ್ಷಕ್ಕೂ ಹೆಚ್ಚು (71,91,939) ಲಸಿಕೆ ಡೋಸ್ಗಳನ್ನು ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡುವ ಮೂಲಕ ದೇಶಾದ್ಯಂತ ಲಸಿಕೆ ಅಭಿಯಾನವನ್ನು ಜನವರಿ 16 ರಂದು ಪ್ರಾರಂಭಿಸಲಾಯಿತು. ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ಫೆಬ್ರವರಿ 2 ರಿಂದ ಪ್ರಾರಂಭವಾಯಿತು.
ಕೋವಿಡ್-19 ವ್ಯಾಕ್ಸಿನೇಷನ್ನ ಮುಂದಿನ ಹಂತವು ಮಾರ್ಚ್ 1 ರಿಂದ 60 ವರ್ಷಕ್ಕಿಂತ ಮೇಲ್ಪಟ್ಟ ಜನರಿಗೆ ಮತ್ತು 45 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವ ಕಾಯಿಲೆ ಹೊಂದಿದವರಿಗೆ ಪ್ರಾರಂಭವಾಯಿತು. ದೇಶವು ಏಪ್ರಿಲ್ 1 ರಿಂದ 45 ವರ್ಷಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ಜನರಿಗೆ ಲಸಿಕೆಯನ್ನು ನೀಡಲು ಪ್ರಾರಂಭಿಸಿತು. ನಂತರ ಸರ್ಕಾರವು ತನ್ನ ವ್ಯಾಕ್ಸಿನೇಷನ್ ಡ್ರೈವ್ ಅನ್ನು ವಿಸ್ತರಿಸಲು ನಿರ್ಧರಿಸಿ, 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಮೇ 1 ರಿಂದ ಲಸಿಕೆ ನೀಡಲು ಆರಂಭಿಸಿತು. ಒಂದು ವರ್ಷದೊಳಗಡೆ ಲಸಿಕೆ ನೀಡುವಿಕೆಯಲ್ಲಿ ಭಾರತ ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.