ಬಂಟ್ವಾಳ : ರಕ್ಷಾಬಂಧನವು ಹಿಂದು ಸಮಾಜದಲ್ಲಿ ಸಾಮರಸ್ಯವನ್ನು ಬೆಳೆಸುತ್ತಾ ಒಗ್ಗಟ್ಟಿನ ಚಿಂತನೆಯೊಂದಿಗೆ ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಮುನ್ನುಡಿಯಾಗಿದೆ. ರಕ್ಷೆಯಲ್ಲಿರುವ ಒಂದೊಂದು ಎಸಳುಗಳಂತೆ ಹಿಂದೂ ಸಮಾಜದ ಎಲ್ಲರನ್ನು ಒಗ್ಗೂಡಿಸಿ ಸದೃಢ ಸಮಾಜವನ್ನು ಕಟ್ಟಲು ಇಂತಹ ದಿನಗಳು ಸಹಾಯಕವಾಗುತ್ತದೆ ಎಂದು ಶ್ರೀರಾಮ ಪದವಿ ಪೂರ್ವ ಕಾಲೇಜಿನ ಗಣಕ ಯಂತ್ರ ವಿಭಾಗದ ಉಪನ್ಯಾಸಕಿ ಶ್ರೀಮತಿ ರಶ್ಮಿ ಹೇಳಿದರು.
ಅವರು ಶ್ರೀರಾಮ ಪದವಿ ಕಾಲೇಜಿನ ಪ್ರಣವ ವಿದ್ಯಾರ್ಥಿ ಸಂಘದ ವತಿಯಿಂದ ನಡೆದ ರಕ್ಷಾಬಂಧನ ಕಾರ್ಯಕ್ರಮವನ್ನು ಉದ್ಧೇಶಿಸಿ ಮಾತನಾಡಿದರು. ಈ ಸಂಧರ್ಭದಲ್ಲಿ ವಿದ್ಯಾರ್ಥಿಗಳು – ಉಪನ್ಯಾಸಕ ಮತ್ತು ಉಪನ್ಯಾಕೇತರ ವೃಂದಕ್ಕೆ, ವಿದ್ಯಾರ್ಥಿ-ವಿದ್ಯಾರ್ಥಿಗಳು ಪರಸ್ಪರ ರಕ್ಷೆಯನ್ನು ಕಟ್ಟಿ, ಸಿಹಿ ತಿನ್ನಿಸಿ ರಕ್ಷಾಬಂಧನದ ಶುಭಾಶಯ ಕೋರಿದರು.
ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ ಕಾಯರ್ಕಟ್ಟೆ , ವಿದ್ಯಾರ್ಥಿ ಸಂಘದ ಜೊತೆ ಕಾರ್ಯದರ್ಶಿ ಮೋಹಿನಿ ಎ ಬಿ ಉಪಸ್ಥಿತರಿದ್ದರು. ವಿದ್ಯಾರ್ಥಿ ನಾಯಕ ಶ್ರೀ ರಾಮ್ ವಂದಿಸಿ, ಜೊತೆ ಕಾರ್ಯದರ್ಶಿ ಶರಣ್ ಕುಮಾರ್ ಸ್ವಾಗತಿಸಿ, ವಿದ್ಯಾರ್ಥಿ ಸುಶ್ಮಿತಾ ಕಾರ್ಯಕ್ರಮ ನಿರ್ವಹಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.