ಮಂಗಳೂರು: ಬಿಜೆಪಿಯ ಭೀಷ್ಮ’ ಎಂದೇ ಕರೆಸಿಕೊಳ್ಳುತ್ತಿದ್ದ ಪುತ್ತೂರಿನ ಮಾಜಿ ಶಾಸಕ ಉರಿಮಜಲು ಕೆ. ರಾಮ ಭಟ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
“ಜನಸಂಘ ಮತ್ತು ಬಿಜೆಪಿಯ ಇತಿಹಾಸದಲ್ಲಿ ಉರಿಮಜಲು ಕೆ.ರಾಮ ಭಟ್ ಅವರಂತಹ ಧೀಮಂತ ವ್ಯಕ್ತಿಗಳಿಗೆ ವಿಶೇಷ ಸ್ಥಾನವಿದೆ. ಕರ್ನಾಟಕದಲ್ಲಿ ನಮ್ಮ ಪಕ್ಷವನ್ನು ಬಲಪಡಿಸಲು ಅವರು ಅವಿರತ ಶ್ರಮಿಸಿದರು ಮತ್ತು ಜನರೊಂದಿಗೆ ದಣಿವರಿಯಿಲ್ಲದಂತೆ ಸೇವೆ ಸಲ್ಲಿಸಿದರು. ಅವರ ನಿಧನವು ನನಗೆ ದುಃಖ ತಂದಿದೆ. ಅವರ ಕುಟುಂಬಕ್ಕೆ ಸಂತಾಗಳನ್ನು ತಿಳಿಸುತ್ತೇನೆ. ಓಂ ಶಾಂತಿ” ಎಂದು ಮೋದಿ ಟ್ವಿಟ್ ಮಾಡಿದ್ದಾರೆ.
ಜನಸಂಘದ ಪ್ರಭಾವಿ ನಾಯಕರಾಗಿ, ವಕೀಲರಾಗಿ, ಪುತ್ತೂರು ಪುರಸಭೆಯ ಅಧ್ಯಕ್ಷರಾಗಿ, ಕ್ಯಾಂಪ್ಕೊದ ಅಧ್ಯಕ್ಷರಾಗಿ, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿ, ಪುತ್ತೂರಿನ ಶಾಸಕರಾಗಿ, ಭಾರತೀಯ ಜನತಾ ಪಾರ್ಟಿಯ ಮುಂಚೂಣಿಯ ಮುಖಂಡರಾಗಿ ವಿವಿಧ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ರಾಮ ಭಟ್ ಅವರು ಸೋಮವಾರ ವಯೋಸಹಜ ಕಾಯಿಲೆಯಿಂದ ಬಳಲಿ ಇಹಲೋಕ ತ್ಯಜಿಸಿದ್ದಾರೆ.
ಬಿಜೆಪಿ ವರಿಷ್ಠರಾಗಿದ್ದ ಲಾಲ್ಕೃಷ್ಣ ಅಡ್ವಾಣಿ ಸೇರಿದಂತೆ ದಿಗ್ಗಜ ನಾಯಕಯ ಒಡನಾಡಿಯಾಗಿದ್ದ ರಾಮ ಭಟ್ಟರು ತುರ್ತು ಪರಿಸ್ಥಿತಿ ವಿರೋಧಿಸಿ ಹೋರಾಟ ನಡೆಸಿ ಜೈಲು ಸೇರಿದ್ದರು.
In the history of the Jana Sangh and BJP, stalwarts like Urimajalu K. Rama Bhat Ji have a special place. He assiduously worked to strengthen our Party in Karnataka and served tirelessly among people. I am saddened by his demise. Condolences to his family. Om Shanti.
— Narendra Modi (@narendramodi) December 7, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.