ನವದೆಹಲಿ: ಭಾರತ ಏಷ್ಯಾದ 4ನೇ ಅತ್ಯಂತ ಶಕ್ತಿಶಾಲಿ ರಾಷ್ಟ್ರವಾಗಿ ಹೊರಹೊಮ್ಮಿದೆ. ಲೋವಿ ಇನ್ಸ್ಟಿಟ್ಯೂಟ್ ಏಷ್ಯಾ ಪವರ್ ಇಂಡೆಕ್ಸ್-2021 ಏಷ್ಯಾದ ಅತ್ಯಂತ ಶಕ್ತಿಶಾಲಿ ದೇಶಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಭಾರತ ನಾಲ್ಕನೇ ಸ್ಥಾನ ಪಡೆದುಕೊಂಡಿದೆ.
ಸಿಡ್ನಿ ಮೂಲದ ಲೋವಿ ಇನ್ಸ್ಟಿಟ್ಯೂಟ್ 2021 ರ ಏಷ್ಯಾ ಪವರ್ ಇಂಡೆಕ್ಸ್ನಲ್ಲಿ 26 ಶಕ್ತಿಶಾಲಿ ದೇಶಗಳ ಪಟ್ಟಿಯನ್ನು ಪ್ರಕಟಿಸಿದೆ. ಅಮೆರಿಕ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ಚೀನಾ ಎರಡನೇ ಸ್ಥಾನ ಪಡೆದುಕೊಂಡಿದೆ. ಬಳಿಕ ಜಪಾನ್, ಭಾರತ, ರಷ್ಯಾ, ಆಸ್ಟ್ರೇಲಿಯಾ, ದಕ್ಷಿಣ ಕೊರಿಯಾ, ಸಿಂಗಪುರ್, ಇಂಡೋನೇಷ್ಯಾ ಮತ್ತು ಥೈಲ್ಯಾಂಡ್ ಸ್ಥಾನ ಪಡೆದುಕೊಂಡಿವೆ.
ವರದಿಯು ಭಾರತವನ್ನು ಏಷ್ಯಾದ ಮಧ್ಯಮ ಶಕ್ತಿ ಎಂದು ಹೇಳಿದೆ. ದೇಶದ ಸಂಪನ್ಮೂಲ ಮತ್ತು ಪ್ರಭಾವದ ಆಧಾರದ ಮೇಲೆ ಈ ಶ್ರೇಯಾಂಕವನ್ನು ನೀಡಲಾಗಿದೆ. ಭವಿಷ್ಯದ ಸಂಪನ್ಮೂಲ ಮಾಪನದಲ್ಲಿ ಭಾರತವನ್ನು ಅತ್ಯುತ್ತಮ ಪ್ರದರ್ಶನ ನೀಡುವುದರಲ್ಲಿ ಒಂದಾಗಿದೆ ಎಂದು ಪರಿಗಣಿಸಿದೆ.
ರಕ್ಷಣಾ ವಲಯದಲ್ಲಿ ಭಾರತಕ್ಕೆ ಏಳನೇ ಸ್ಥಾನವಿದ್ದರೆ, ಆರ್ಥಿಕ ಪ್ರಗತಿಯಲ್ಲಿ ದೇಶ 8ನೇ ಸ್ಥಾನಕ್ಕೆ ಕುಸಿದಿದೆ. 2021ರಲ್ಲಿ ಭಾರತ ತನ್ನ ಸ್ಥಿತಿಸ್ಥಾಪಕತ್ವ ಮತ್ತು ಸೇನಾ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡಿದೆ. ಆದರೂ, ಕೊರೊನಾ ವೈರಸ್ ದಾಳಿಗೂ ಮುನ್ನದ ಬೆಳವಣಿಗೆಗೆ ಹೋಲಿಸಿದರೆ ಇದು ಕಡಿಮೆಯೇ ಎಂದು ವರದಿ ಉಲ್ಲೇಖಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.