ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ರೋಗದ ಆರಂಭದಿಂದಲೂ ಮತ್ತು ಇತರ ಸಹಾಯವನ್ನು ಭಾರತ ಪೂರೈಸಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.
ನಿನ್ನೆ ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ರಾಜ್ಯ ಸಚಿವೆ ಡಾ ಭಾರತಿ ಪವಾರ್ ಈ ವಿಷಯ ತಿಳಿಸಿದ್ದಾರೆ.
ಈ ವರ್ಷದ ಜನವರಿಯಲ್ಲಿ ಲಸಿಕೆ ಮೈತ್ರಿ ಕಾರ್ಯಕ್ರಮ ಪ್ರಾರಂಭವಾದಾಗಿನಿಂದ, ಭಾರತವು ಇಲ್ಲಿಯವರೆಗೆ 94 ದೇಶಗಳು ಮತ್ತು ಎರಡು ಯುಎನ್ ಘಟಕಗಳಿಗೆ ಏಳು ಕೋಟಿ 23 ಲಕ್ಷ ಡೋಸ್ ಕೋವಿಡ್ ಲಸಿಕೆಗಳನ್ನು ಅನುದಾನ ಮತ್ತು ವಾಣಿಜ್ಯ ರಫ್ತು ರೂಪದಲ್ಲಿ ಪೂರೈಸಿದೆ ಎಂದಿದ್ದಾರೆ.
ಕೋವಿಡ್-19 ಸಾಂಕ್ರಾಮಿಕದ ಎರಡನೇ ಅಲೆಯ ಸಮಯದಲ್ಲಿ, 50 ಕ್ಕೂ ಹೆಚ್ಚು ದೇಶಗಳಿಂದ ಕೋವಿಡ್-ಸಂಬಂಧಿತ ಉಪಕರಣಗಳು ಮತ್ತು ಔಷಧಿಗಳ ರೂಪದಲ್ಲಿ ಬೆಂಬಲವನ್ನು ಸ್ವೀಕರಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.