ಬೆಂಗಳೂರು: ಕೊರೋನಾ ವಿರುದ್ಧದ ಹೋರಾಟದಲ್ಲಿ ಕರ್ನಾಟಕ ದಕ್ಷಿಣ ಭಾರತದ ಇತರ ರಾಜ್ಯಗಳಿಗಿಂತ ಮುಂದಿದೆ. ಯಾಕೆಂದರೆ ರಾಜ್ಯದ ಪಾಸಿಟಿವಿಟಿ ದರ ದಕ್ಷಿಣ ಭಾರತದಲ್ಲೇ ಅತ್ಯಂತ ಕಮ್ಮಿ ಎಂಬುದು ವರದಿಗಳಿಂದ ತಿಳಿದು ಬಂದಿದೆ.
ರಾಜ್ಯದಲ್ಲಿ ಕೊರೋನಾ ಪರೀಕ್ಷೆಗೆ ಒಳಗಾಗುತ್ತಿರುವ 300 ಮಂದಿಯಲ್ಲಿ ಕೇವಲ ಒಬ್ಬರಿಗೆ ಮಾತ್ರ ಸೋಂಕು ಕಾಣಿಸಿಕೊಳ್ಳುತ್ತಿದೆ. ಕಳೆದ ಒಂದು ವಾರದಿಂದ ಈ ಬೆಳವಣಿಗೆ ಇದೆ ಎನ್ನಲಾಗಿದೆ. ರಾಜ್ಯದ 10 ಜಿಲ್ಲೆಗಳಲ್ಲಿ ಪರೀಕ್ಷೆಗೆ ಒಳಪಡುವ ಸರಾಸರಿ ಒಂದು ಸಾವಿರ ಮಂದಿಯ ಪೈಕಿ ಒಬ್ಬರಲ್ಲೂ ಸೋಂಕು ಪತ್ತೆಯಾಗಿಲ್ಲ. ಇದು ರಾಜ್ಯದಲ್ಲಿ ಸೋಂಕು ಹತೋಟಿಯಲ್ಲಿದೆ ಎಂಬುದಕ್ಕೆ ಸಾಕ್ಷಿ ಎಂದು ಆರೋಗ್ಯ ತಜ್ಞರು ಅಭಿಪ್ರಾಯಿಸಿದ್ದಾರೆ..
ರಾಜ್ಯದಲ್ಲಿ ಕೊರೊನಾ ಸೋಂಕು ಅಸ್ತಿತ್ವದಲ್ಲಿದ್ದರೂ ಕೂಡ ಮಾತ್ರ ಹತೋಟಿಯಲ್ಲಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಕರ್ನಾಟಕದಲ್ಲಿ ಅತ್ಯಂತ ಕಡಿಮೆ ಅಂದರೆ 0.37ರಷ್ಟು ಪಾಸಿಟಿವಿಟಿ ದರ ಇದೆ.
ಕೋವಿಡ್ ಪರೀಕ್ಷೆಗೆ ಒಳಗಾಗುವ ಸರಾಸರಿ ನೂರು ಮಂದಿಯ ಪೈಕಿ ಎಷ್ಟು ಜನರಲ್ಲಿ ಸೋಂಕು ಪತ್ತೆಯಾಗುತ್ತದೆ ಎಂಬುದರ ಮೇಲೆ ಪಾಸಿಟಿವಿಟಿ ದರವನ್ನು ಅಂದಾಜು ಮಾಡಲಾಗುತ್ತದೆ.
ಕೇರಳದಲ್ಲಿ ಪ್ರಸ್ತುತ ಶೇಕಡ 7, ಮಹಾರಾಷ್ಟ್ರದಲ್ಲಿ ಶೇ 1.1, ತೆಲಂಗಾಣ ಮತ್ತು ಆಂಧ್ರದಲ್ಲಿ ತಲಾ ಶೇ. 0.5, ತಮಿಳುನಾಡಿನಲ್ಲಿ ಶೇ 0.7ರಷ್ಟು ಪಾಸಿಟಿವಿಟಿ ದರ ಇದೆ. ಕರ್ನಾಟಕದಲ್ಲಿ ಅತೀ ಕಡಿಮೆ ಅಂದರೆ ಶೇ 0.37ರಷ್ಟು ಪಾಸಿಟಿವಿಟಿ ದರ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.