ನವದೆಹಲಿ: ಏಕ ಶ್ರೇಣಿ, ಏಕ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಮಾಜಿ ಸೈನಿಕರ ಆರೋಗ್ಯ ಸ್ಥಿತಿ ಬಿಗಾಡಿಸುತ್ತಿದ್ದು, ಅವರಿಗೆ ಏನಾದರು ಅಪಾಯ ಸಂಭವಿಸಿದರೆ ಅದಕ್ಕೆ ಸರ್ಕಾರವೇ ಹೊಣೆಯಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.
‘ಕಳೆದ 14 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಹವಲ್ದಾರ್ ಮೇಜರ್ ಸಿಂಗ್ ಅವರ ಆರೋಗ್ಯ ತೀರಾ ಹದಗೆಟ್ಟಿದೆ, ಇದೀಗ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೊದಮೊದಲು ಅವರು ಪ್ರತಿಭಟನಾ ಸ್ಥಳ ಜಂತರ್ ಮಂತರ್ ತೊರೆದು ಆಸ್ಪತ್ರೆಗೆ ದಾಖಲಾಗಲು ನಿರಾಕರಿಸಿದ್ದರು. ಅವರಿಗೆ ಏನಾದರು ಅಪಾಯ ಸಂಭವಿಸಿದರೆ ಸರ್ಕಾರವೇ ಹೊಣೆ’ ಎಂದು ಗ್ರೂಪ್ ಕ್ಯಾಪ್ಟನ್ ವಿಕೆ ಗಾಂಧಿ ಹೇಳಿದ್ದಾರೆ.
ಉಪವಾಸ ಮಾಡುತ್ತಿದ್ದ ಮತ್ತೊಬ್ಬ ಮಾಜಿ ಸೈನಿಕ ಹವಲ್ದಾರ್ ಅಶೋಕ್ ಚೌವ್ಹಾಣ್ ಅವರನ್ನು ಆ.25ರಂದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಈಗ ಸುಧಾರಿಸಿದೆ ಎನ್ನಲಾಗಿದೆ.
ಅಲ್ಲದೇ ಮಾಜಿ ಸೈನಿಕರ ಆರೋಗ್ಯ ಹದಗೆಡುತ್ತಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಿಗೂ ಪತ್ರ ಬರೆಯಲಾಗಿದೆ.
ಏಕ ಶ್ರೇಣಿ, ಏಕ ಪಿಂಚಣಿ ಯೋಜನೆ ಬಗ್ಗೆ ಸರ್ಕಾರ ಮಾತುಕತೆ ನಡೆಸುತ್ತಿದೆಯಾದರೂ ಇದುವರೆಗೆ ಯಾವ ಫಲಶೃತಿಯೂ ಆಗಿದೆ. ಹೀಗಾಗಿ ಹೋರಾಟ ತೀವ್ರಗೊಳಿಸಲು ಮಾಜಿ ಸೈನಿಕರು ನಿರ್ಧರಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.