ಹಾವೇರಿ: ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರ ಸಾವನ್ನು ಕೆಲವು ಮತಾಂಧರು ಸಾಮಾಜಿಕ ಜಾಲತಾಣಗಳಲ್ಲಿ ಸಂಭ್ರಮಿಸಿದ್ದಾರೆ. ದೇಶದ ನಾನಾ ಭಾಗಗಳಿಂದ ಇಂತಹ ಕೃತ್ಯಗಳು ವರದಿಯಾಗಿದೆ. ಕರ್ನಾಟಕದಲ್ಲೂ ಕೂಡ ಇಂತಹ ನೀಚ ಕೃತ್ಯವನ್ನು ಕೆಲವು ಕಿಡಿಗೇಡಿಗಳು ಮಾಡಿದ್ದಾರೆ. ಇವರ ವಿರುದ್ಧ ಇಂದು ಸಿಎಂ ಗುಡುಗಿದ್ದಾರೆ.
ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರ ಸಾವನ್ನು ಸಂಭ್ರಮಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.
They should be booked immediately as this is absolutely unpardonable.
— Basavaraj S Bommai (@BSBommai) December 10, 2021
ಅವರು ರಾಜ್ಯ ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆ ಅಂಗವಾಗಿ ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ತಾಲೂಕು ಪಂಚಾಯತಿ ಕಚೇರಿಗೆ ಬಂದು ಮತ ಚಲಾಯಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ದೇಶವೇ ಬಿಪಿನ್ ರಾವತ್ ಸಾವಿಗೆ ಕಂಬನಿ ಮಿಡಿಯುತ್ತಿದೆ. ಅದರೆ ಕೆಲವರು ಅವರ ಸಾವನ್ನು ಸಂಭ್ರಮಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ಗಳನ್ನು ಹಾಕಿದ್ದಾರೆ. ಇಂತಹ ವರ್ತನೆ ಖಂಡನೀಯ, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಸಾಮಾನ್ಯ ಜನರಿಂದಲೂ ಕೂಡ ಬಿಪಿನ್ ರಾವತ್ ನಿಧನದ ಬಗ್ಗೆ ವಿಕೃತಿ ಮೆರೆದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವವವರ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದು, ಕಠಿಣ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯಗಳು ಕೇಳಿಬರುತ್ತಿವೆ.
ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದು ಬೆಂಗಳೂರಿಗೆ ಹೆಚ್ಚಿನ ಚಿಕಿತ್ಸೆಗೆ ವರ್ಗಾವಣೆಗೊಂಡಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಪ್ರತಾಪ್ ಸಿಂಗ್ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆಯಲು ಸಿಎಂ ಏರ್ ಫೋರ್ಸ್ ಕಮಾಂಡೋ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.