ನವದೆಹಲಿ: ಪಟೇಲ್ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಒತ್ತಾಯಿಸಿ ಗುಜರಾತಿನಲ್ಲಿ ಸರ್ಕಾರದ ವಿರುದ್ಧ ಬೃಹತ್ ಹೋರಾಟವನ್ನೇ ನಡೆಸುತ್ತಿರುವ ಹಾರ್ದಿಕ್ ಪಟೇಲ್, ಇದೀಗ ತನ್ನ ಹೋರಾಟವನ್ನು ಇತರ ರಾಜ್ಯಗಳಿಗೂ ವಿಸ್ತರಿಸುವುದಾಗಿ ಎಚ್ಚರಿಕೆ ನೀಡಿದ್ದಾನೆ.
ಕುರ್ಮಿಸ್ ಮತ್ತು ಗುಜ್ಜರ್ ಸಮುದಾಯವನ್ನೂ ಮೀಸಲಾತಿ ಹೋರಾಟದಲ್ಲಿ ಭಾಗವಹಿಸುವಂತೆ ಮಾಡುತ್ತೇವೆ ಎಂದು ಆತ ಹೇಳಿಕೊಂಡಿದ್ದಾನೆ.
ಗುಜರಾತಿನಲ್ಲಿ ನಡೆಯುತ್ತಿರುವ ಹೋರಾಟವನ್ನು ರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗುತ್ತೇವೆ. ನಮ್ಮ ಸಂಪರ್ಕದಲ್ಲಿ ೧೨ ರಾಜ್ಯಗಳಿವೆ ಎಂದು ಹಾರ್ದಿಕ್ ಹೇಳಿದ್ದಾನೆ.
ಅಲ್ಲದೇ ಆತ ಈಗಾಗಲೇ ಕುರ್ಮಿಸ್ ಮತ್ತು ಗುಜ್ಜರ್ ಸಮುದಾಯದ ಮುಖಂಡರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾನೆ.
ಗುಜರಾತ್ನಲ್ಲಿ ಪ್ರಬಲ ಸಮುದಾಯ ಎನಿಸಿರುವ ಪಟೇಲ್ ಸಮುದಾಯಕ್ಕೆ ಮೀಸಲಾತಿ ಕೊಡಬೇಕು ಎಂಬುದು ಹಾರ್ದಿಕ್ ಮತ್ತು ಆತನ ಬೆಂಬಲಿಗರ ಬೇಡಿಕೆಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.