ನವದೆಹಲಿ: ಕಾಶಿ ವಿಶ್ವನಾಥ ಧಾಮ ಉದ್ಘಾಟನೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಾರಣಾಸಿಗೆ ಆಗಮಿಸಿದ್ದು, ಕಾಲ ಭೈರವ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಬಳಿಕ ಅವರು ಕಾಶಿ ವಿಶ್ವನಾಥ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ.
ಸುಮಾರು 339 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಶ್ರೀ ಕಾಶಿ ವಿಶ್ವನಾಥ ಧಾಮದ 1 ನೇ ಹಂತವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಪಿಎಂ ಮೋದಿ, ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಮತ್ತು ಬಿಜೆಪಿಯ ಇತರ ಪ್ರಮುಖ ನಾಯಕರು ಇಂದು ವಿಹಾರ ದೋಣಿಯಲ್ಲಿ ಕುಳಿತು ಘಾಟ್ಗಳಲ್ಲಿ ‘ಗಂಗಾ ಆರತಿ’ಯನ್ನು ವೀಕ್ಷಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಧಾನಿ ಮೋದಿ ಅವರು ಮಧ್ಯಾಹ್ನ 1 ಗಂಟೆಗೆ ಕಾಶಿ ದೇಗುಲಕ್ಕೆ ಭೇಟಿ ನೀಡಲಿದ್ದಾರೆ ಮತ್ತು ರೂ 339 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಶ್ರೀ ಕಾಶಿ ವಿಶ್ವನಾಥ ಧಾಮದ ಮೊದಲ ಹಂತವನ್ನು ಉದ್ಘಾಟಿಸಲಿದ್ದಾರೆ. ಯೋಜನೆಯ ಈ ಹಂತದಲ್ಲಿ 23 ಕಟ್ಟಡಗಳನ್ನು ಉದ್ಘಾಟಿಸಲಾಗುತ್ತದೆ. ಸುಮಾರು ಐದು ಲಕ್ಷ ಚದರ ಅಡಿಗಳಷ್ಟು ಬೃಹತ್ ಪ್ರದೇಶದಲ್ಲಿ ಇದು ಹರಡಿದೆ. ಹಿಂದಿನ ಆವರಣವು 3,000 ಚದರ ಅಡಿಗಳಲ್ಲಿ ಹರಡಿತ್ತು.
#WATCH Prime Minister Narendra Modi offers prayers at Kaal Bhairav temple in Varanasi
Later, he will offer prayers at Kashi Vishwanath temple inaugurate phase 1 of Kashi Vishwanath Corridor
(Source: DD) pic.twitter.com/ZmO1AG08uC
— ANI UP (@ANINewsUP) December 13, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.