ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಉಸ್ಗಾಮ್ ಪತ್ರಿ ಗ್ರಾಮದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಭಯೋತ್ಪಾದಕನನ್ನು ಸಂಹಾರ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪೊಲೀಸ್ ವಕ್ತಾರರ ಪ್ರಕಾರ, ನಿನ್ನೆ ತಡರಾತ್ರಿ ಎನ್ಕೌಂಟರ್ ಪ್ರಾರಂಭವಾಗಿದ್ದು, ಇದರಲ್ಲಿ ಒಬ್ಬ ಅಪರಿಚಿತ ಭಯೋತ್ಪಾದಕನನ್ನು ಕೊಲ್ಲಲಾಗಿದೆ.
ಉಗ್ರರು ಈ ಪ್ರದೇಶದಲ್ಲಿ ಅವಿತಿರುವ ಬಗ್ಗೆ ಖಚಿತ ವರದಿಗಳು ಬಂದ ಹಿನ್ನೆಲೆಯಲ್ಲಿ ಸೇನಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿವೆ. ಈ ವೇಳೆ ಯೋಧರು ಸಮೀಪಕ್ಕೆ ಬರುತ್ತಿದ್ದಂತೆ ಉಗ್ರರು ಗುಂಡು ಹಾರಿಸಿದ್ದಾರೆ. ಪ್ರತಿಯಾಗಿ ಗುಂಡು ಹಾರಿಸಿದ ಸೇನೆ ಒಬ್ಬ ಉಗ್ರನನ್ನು ಸಂಹರಿಸಿದೆ.
ಈಗಲೂ ಈ ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರಿದಿದೆ ಮತ್ತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
Jammu & Kashmir: One unidentified terrorist neutralized in the encounter that broke out between security forces and terrorists in Rajpura area of Pulwama.
(Visuals deferred by unspecified time) pic.twitter.com/rL6iLSldT0
— ANI (@ANI) December 15, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.